Advertisement

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

09:53 PM Dec 19, 2024 | Team Udayavani |

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬಗ್ಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿ ಖಾನಾಪುರ ಠಾಣೆಗೆ ಕರೆದೊಯ್ಯಲಾಯಿತು.

Advertisement

ಸುವರ್ಣ ವಿಧಾನಸೌಧದಲ್ಲಿದ್ದ ಸಿ.ಟಿ. ರವಿ ಅವರನ್ನು ಡಿಸಿಪಿ ರೋಹನ್ ಜಗದೀಶ ನೇತೃತ್ವದಲ್ಲಿ ಪೊಲೀಸರು ಹೆಗಲ ಮೇಲೆ ಹೊತ್ತುಕೊಂಡು ಪೊಲೀಸ್ ಜೀಪ್‌ನಲ್ಲಿ ಹಾಕಿಕೊಂಡು ಕರೆದೊಯ್ದರು.

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದರೂ ರಾಷ್ಟೀಯ ಹೆದ್ದಾರಿ-4ರ ಮೂಲಕ ರವಿ ಅವರನ್ನು ಪೊಲೀಸ್ ಭದ್ರತೆಯಲ್ಲಿ ನೇರವಾಗಿ ಖಾನಾಪುರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಯಿತು. ರವಿ ಅವರಿದ್ದ ವಾಹನದ ಸುತ್ತಲೂ ಸುಮಾರು ಏಳೆಂಟು ಪೊಲೀಸ್ ಜೀಪ್‌ಗಳ ಮಧ್ಯೆ ಠಾಣೆಗೆ ಕರೆದುಕೊಂಡು ಹೋಗಲಾಯಿತು.

 

Advertisement

Udayavani is now on Telegram. Click here to join our channel and stay updated with the latest news.

Next