ಚಿಕ್ಕಮಗಳೂರು: ದಿಢೀರ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಚಿಕ್ಕಮಗಳೂರಿನ ಶಾಸಕ ಸಿ.ಟಿ. ರವಿ ಅವರು ದಿಢೀರ್ ತಡರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳುತ್ತಿದ್ದ ಕಾರಣ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಧಾನಸಭೆ ಚುನಾವಣೆ ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ಆದರೆ ನಿನ್ನೆ ತಡರಾತ್ರಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಹಿಂದೆಯೂ ಸಹ ಅವರು ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ. ರವಿ ಅವರು ಆಸ್ಪತ್ರೆಗೆ ಸೇರಿದ್ದರು. ಆಗ ವೈದ್ಯರು ಸಿ.ಟಿ.ರವಿ ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎನ್ನುವ ಮಾಹಿತಿಯನ್ನು ನೀಡಿದ್ದರು. ಆದರೆ ಇದೀಗ ಮತ್ತೆ ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಗೆ ಸೇರಿದ್ದಾರೆ.