Advertisement

ಸಿ.ಟಿ.ರವಿ ಅವರಿಗೆ ಸೋಲಿನ ಆಘಾತ; ಫಲಿಸಿದ ಕೈ ತಂತ್ರ

03:14 PM May 13, 2023 | Team Udayavani |

ಚಿಕ್ಕಮಗಳೂರು : ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಮ್ಮ ಆಪ್ತನಾಗಿದ್ದ ಎಚ್.ಡಿ.ತಮ್ಮಯ್ಯ ಅವರಿಂದ ಸೋಲಿನ ಶಾಕ್ ಅನುಭವಿಸಿದ್ದಾರೆ.

Advertisement

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ತಮ್ಮಯ್ಯ ಅವರು ಬಿಜೆಪಿಯ ಭದ್ರ ಕೋಟೆಯಲ್ಲಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅವರಿಗೆ ಟಿಕೆಟ್ ಘೋಷಿಸಿದಾಗ ವ್ಯಾಪಕ ವಿರೋಧವೂ ವ್ಯಕ್ತವಾಗಿತ್ತು. ಎಲ್ಲದರ ನಡುವೆ ತಮ್ಮಯ್ಯ ಬಿಜೆಪಿಯ ಪ್ರಬಲ ನಾಯಕನನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಸೇರಿರುವ ತಮ್ಮಯ್ಯ ಬಿಜೆಪಿಯಲ್ಲಿದ್ದರು. ಚಿಕ್ಕಮಗಳೂರು ನಗರಸಭೆಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅವರಿಗೆ ವಿರೋಧದ ನಡುವೆಯೂ ಕಾಂಗ್ರೆಸ್ ಟಿಕೆಟ್ ಘೋಷಿಸಿತ್ತು.

ತಮ್ಮಯ್ಯ 60101 ಮತಗಳನ್ನು ಪಡೆದಿದ್ದು, ಸಿ.ಟಿ.ರವಿ 52201 ಮತಗಳನ್ನು ಪಡೆದಿದ್ದಾರೆ. 2018ರಲ್ಲಿ ಸಿ.ಟಿ.ರವಿ 26,314 ಮತಗಳ ಅಂತರದಿಂದ ಗೆದ್ದಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next