Advertisement

Entrance Exam; ಸಿಯುಇಟಿ-ಯುಜಿ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

07:13 PM Mar 26, 2024 | Team Udayavani |

ನವದೆಹಲಿ: ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ-ಯುಜಿ)ಗೆ ಅರ್ಜಿ ಸಲ್ಲಿಸಲು ಇದ್ದ ಗಡುವನ್ನು ಮಾ.31ರವರೆಗೆ ವಿಸ್ತರಿಸಿ ಯುಜಿಸಿ ಅಧ್ಯಕ್ಷ ಎಂ.ಜಗದೇಶ್‌ ಕುಮಾರ್‌ ಮಂಗಳವಾರ ಆದೇಶ ಹೊರಡಿಸಿದ್ದಾರೆ.

Advertisement

ಈ ಹಿಂದೆ, ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಮಂಗಳವಾರವೇ ಕೊನೇ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಹಿನ್ನೆಲೆಯಲ್ಲಿ ಇದನ್ನು ಮಾ.31ರ ರಾತ್ರಿ 9.50ರವರೆಗೆ ವಿಸ್ತರಿಸಲಾಗಿದೆ ಎಂದು ಜಗದೇಶ್‌ ಕುಮಾರ್‌ ತಿಳಿಸಿದ್ದಾರೆ. ಮೇ 15ರಿಂದ 31ರವರೆಗೆ ಪರೀಕ್ಷೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next