Advertisement

ಸೆ.15 ರೊಳಗೆ ಸಿಯುಇಟಿ-ಯುಜಿ ಫ‌ಲಿತಾಂಶ ಪ್ರಕಟ

07:50 PM Sep 09, 2022 | Team Udayavani |

ನವದೆಹಲಿ: ಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆ – ಯು.ಜಿ. ಫ‌ಲಿತಾಂಶ ಸೆ.15ರ ಒಳಗಾಗಿ ಪ್ರಕಟವಾಗಲಿದೆ. ಈ ಬಗ್ಗೆ ಯುಜಿಸಿ ಅಧ್ಯಕ್ಷ ಜಗದೀಶ್‌ ಕುಮಾರ್‌ ಶುಕ್ರವಾರ ತಿಳಿಸಿದ್ದಾರೆ.

Advertisement

ಎಲ್ಲಾ ವಿವಿಗಳ ವೆಬ್‌ಸೈಟ್‌ಗಳಲ್ಲಿ ಫ‌ಲಿತಾಂಶ ಪ್ರಕಟಗೊಂಡ ಬಳಿಕ ಪದವಿಗಳಿಗೆ ಪ್ರವೇಶ ಪ್ರಕ್ರಿಯೆ ಶುರು ಮಾಡಲು ವ್ಯವಸ್ಥೆಗಳನ್ನು ಕಲ್ಪಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಆ.20ರ ಒಳಗಾಗಿ ಸಿಯುಇಟಿ-ಯುಜಿ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ಘೋಷಣೆ ಮಾಡಲಾಗಿತ್ತಾದರೂ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ಪ್ರಕ್ರಿಯೆ ವಿಸ್ತರಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next