Advertisement
ಡಿಸಿ ಕಚೇರಿ ಸಭಾಂಗಣ ದಲ್ಲಿ ಮಂಗಳವಾರ ನಡೆದ ಎನ್‌ಸಿಒಆರ್‌ಡಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ವಸ್ತುಗಳ ಬಗ್ಗೆ ಶಾಲಾ- ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.
ಕರಾವಳಿ ಪೊಲೀಸರು ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆ ಬಗ್ಗೆ ನಿಗಾ ವಹಿಸಬೇಕು. ಜಿಲ್ಲೆಯಲ್ಲಿ 97ಕ್ಕೂ ಹೆಚ್ಚು ಮಾದಕ ಸೇವನೆಗಳ ಪ್ರಕರಣ ದಾಖಲಾಗಿದ್ದು, ಶೇ. 90ರಷ್ಟು ಪ್ರಕರಣಗಳು ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಆಗಿದೆ. ಈ ಬಗ್ಗೆ ಕೇರ್‌ಟೆಕರ್ಗಳನ್ನು ಹೆಚ್ಚು ನಿಯೋಜಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೊಲೀಸ್ ಅಧೀಕ್ಷಕ ಡಾ| ಕೆ.ಅರುಣ್ ಮಾತನಾಡಿ, ಮೌತ್ ಫ್ರೆಶ°ರ್ ಎಂದು ತಂಬಾಕು ಉತ್ಪನ್ನಗಳನ್ನು ಜಾಹೀರಾತುಪಡಿಸಿ, ಮಾರಾಟ ಮಾಡುತ್ತಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಇಂತಹ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಮುಂದಾಗಬೇಕು ಎಂದರು.
Related Articles
Advertisement
ಆ್ಯಪ್ ಬಗ್ಗೆ ಮಾಹಿತಿ ನೀಡಿಜಿಲ್ಲೆಯ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಅಂಗಡಿ, ಹೊಟೇಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಉದ್ದಿಮೆ ಪರವಾನಿಗೆ ರದ್ದು ಪಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ದೂರು ನೀಡಲು ಸರಕಾರ Stop Tobacco ಆ್ಯಪ್ ಅಭಿವೃದ್ಧಿಪಡಿಸಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡಬೇಕು ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದರು.