Advertisement

ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನ; ಡಿಸಿ ಜತೆ ಚರ್ಚೆ

01:57 AM Mar 12, 2022 | Team Udayavani |

ಮಂಗಳೂರು: ಕಾಸರ ಗೋಡಿನ ಕನ್ನಡಿಗರ ಸಾಂಸ್ಕೃತಿಕ ಸ್ಥಿತಿಗತಿ ಗಳನ್ನು ಅಭಿವೃದ್ಧಿ ಪಡಿಸಲು ಕರ್ನಾಟಕದ ಮುಖ್ಯಮಂತ್ರಿಗಳು ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನ ಸ್ಥಾಪನೆ ಬಗ್ಗೆ ಅತ್ಯಂತ ಆಸಕ್ತಿ ತೋರಿದ್ದಾರೆ ಎಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ್‌ ತಿಳಿಸಿದ್ದಾರೆ.

Advertisement

ಶುಕ್ರವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗಡಿ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಿಎಂ ಬೊಮ್ಮಾಯಿ ಸೂಚನೆಯ ಮೇರೆಗೆ ತಾನು ಇಲ್ಲಿಗೆ ಬಂದಿರುವುದಾಗಿ ತಿಳಿಸಿದ ಸೋಮಶೇಖರ್‌, 2022-23ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಘೋಷಿ ಸಿದ ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನ ಕಟ್ಟಡ ಕಟ್ಟಿಸುವ ಯೋಜನೆಗೆ ಕಾಸರಗೋಡಿನಲ್ಲಿ ಉಚಿತವಾಗಿ ಸರಕಾರಿ ನಿವೇಶನ ಒದಗಿಸುವಂತೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್‌ ರಣವೀರ ಚಂದ್‌ ಅವರಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮನವಿ ಸಲ್ಲಿಸಿದರು.

ಬಳಿಕ ಎಡನೀರು ಮಠದಲ್ಲಿ ಸಭೆ ನಡೆಸಿದರು. ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ, ಕಾಸರಗೋಡು ಡಿಸಿ ಭಂಡಾರಿ ರಣವೀರ್‌ ಚಂದ್‌, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್‌ ಮತ್ತೀಹಳ್ಳಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next