Advertisement
ರೋಹಿತ್ ಚಕ್ರವರ್ತಿ ನೇತೃತ್ವದ ಪಠ್ಯ ಪರಿಷ್ಕರಣ ಸಮಿತಿ ರಚಿಸಿರುವ ಪಠ್ಯಕ್ರಮವನ್ನು ವಜಾಗೊಳಿಸುವಂತೆ ಆಗ್ರಹಿಸಿ ಬುಧವಾರ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ನಡೆದ ಪಾದಯಾತ್ರೆಯ ಮುಕ್ತಾಯದಲ್ಲಿ ಪಟ್ಟಣದ ಸಂಸ್ಕೃತಿ ಮಂದಿರದ ಎದುರು ನಡೆದ ಸಭೆಯಲ್ಲಿ ಮಾತನಾಡಿ, ಕನ್ನಡದ ಅಸ್ಮಿತೆಗೆ ಧಕ್ಕೆಯುಂಟಾಗುವ ಸಂದರ್ಭ ಎದುರಾದಾಗ ಪಕ್ಷಾತೀತವಾಗಿ ಹೋರಾಟ ನಡೆಸಬೇಕಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ನಡೆದಿರುವ ಈ ಪಾದಯಾತ್ರೆ ಇದಕ್ಕೆ ಮಾದರಿಯಾಗಿದ್ದು ಇಂದಿಲ್ಲಿ ಆರಂಭಗೊಂಡಿರುವ ಹೋರಾಟನಿರಂತರವಾಗಿ ಮುಂದುವರೆಯಬೇಕಿದೆ ಎಂದರು.
Related Articles
Advertisement
ಮಾಜಿ ಸಭಾಪತಿ ರಮೇಶ್‌ಕುಮಾರ್ ಮಾತನಾಡಿ, ನೇರವಾಗಿ ಸಂವಿಧಾನವನ್ನು ಮುಟ್ಟುವ ಧೈರ್ಯವಿಲ್ಲದ ಬಿಜೆಪಿ ಅನ್ಯಮಾರ್ಗದಿಂದ ಜನರ ಮನಸ್ಸನ್ನು ಕೆಡಿಸುವ ಕೆಲಸ ಮಾಡುತ್ತಿದೆ. ಮಾನವ ನಿರ್ಮಿತ ವಿನಾಶಕಾರಿ ಜಾತಿ ವ್ಯವಸ್ಥೆಯಲ್ಲಿ ವೈಚಾರಿಕ ದಾರಿದ್ರ್ಯದಿಂದ ನರಳುತ್ತಿರುವ ನಾವು ಈ ನೆಲದ ಕುವೆಂಪು, ಕಡಿದಾಳು ಮಂಜಪ್ಪ, ಶಾಂತವೇರಿ ಮುಂತಾದವರ ಹೆಸರು ಹೇಳುವ ಅರ್ಹತೆಯನ್ನು ಕಳೆದುಕೊಂಡಿದ್ದೇವೆ. ಆದರೆಮಾಜಿ ಸಿಎಂ ಸಿದ್ದರಾಮಯ್ಯನವರು ಮಾತ್ರ ನಿರ್ಭಯವಾಗಿ ನೈತಿಕತೆಯ ಬಗ್ಗೆ ಮಾತನಾಡುವ ಅರ್ಹತೆಯನ್ನು ಉಳಿಸಿಕೊಂಡಿದ್ದಾರೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಯಕ್ರಮದ ಆಯೋಜಕ ಕಿಮ್ಮನೆ ರತ್ನಾಕರ್, ಪ್ರಗತಿಪರ ಚಿಂತಕರು,ಸಾಹಿತಿಗಳ ಸಹಕಾರದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಒಂದು ಕೋಟಿ ಮಕ್ಕಳ ಮನಸ್ಸನ್ನು ಕೆಡಿಸುವ ಈ ಪ್ರಕರಣದ ಬಗ್ಗೆ ನಾಡಿನ ಚಿಂತಕರು ಮುಂದಾದಲ್ಲಿ ಈ ಸರ್ಕಾರ ತಕ್ಕ ಬೆಲೆಯನ್ನು ನೀಡಬೇಕಾದ ಸ್ಥಿತಿ ನಿರ್ಮಾಣವಾಗಲಿದೆ ಎಂದರು. ಈ ಸಂದರ್ಭದಲ್ಲಿ ವಿಶ್ವಮಾನವ ವೇದಿಕೆಯ ಸಂಚಾಲಕ ಕಡಿದಾಳು ದಯಾನಂದ್, ಡಾ.ನಾ ಡಿಸೋಜಾ, ಮಾಜಿ ಶಾಸಕ ವೈ.ಎಸ್.ವಿ.ದತ್ತಾ, ರೈತ ಮುಖಂಡರಾದ ಕೆ.ಟಿ.ಗಂಗಾಧರ್ ಹಾಗೂ ಬಸವರಾಜಪ್ಪ, ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಎಚ್.ಎಸ್. ಸುಂದರೇಶ್ ಮುಂತಾದವರು ವೇದಿಕೆಯಲ್ಲಿದ್ದರು.