ಶ್ರೀನಗರ: ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಕೆಲವು ಗುಂಪುಗಳು ಪ್ರಯತ್ನ ನಡೆಸಿದ ನಂತರ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾಹ್ ಪಟ್ಟಣದಲ್ಲಿ ಗುರುವಾರ ಸಂಜೆ ಕರ್ಫ್ಯೂ ವಿಧಿಸಲಾಗಿದೆ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸಲಾಗಿದೆ
ತಡರಾತ್ರಿ ಕರ್ಫ್ಯೂ ಅನ್ನು ಬಿಗಿಗೊಳಿಸಲಾಯಿತು. ಅಲ್ಲದೆ ದೂರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು ಎಂದು ಜಿಲ್ಲಾಡಳಿತ ತಿಳಿಸಿದೆ.
ಸ್ಥಳೀಯ ಮುಸ್ಲಿಂ ಧರ್ಮಗುರುಗಳು ದ್ವೇಷಪೂರಿತ ಭಾಷಣ ಮಾಡಿ ನೂಪುರ್ ಶರ್ಮಾ ಅವರ ಶಿರಚ್ಛೇದಕ್ಕೆ ಕರೆ ನೀಡಿದ ನಂತರ ಈ ಬೆಳವಣಿಗೆಗಳು ನಡೆದಿದೆ. ಇನ್ನೊಂದು ಘಟನೆಯಲ್ಲಿ ಹಿಂದೂ ಯುವಕನೊಬ್ಬ ಪ್ರವಾದಿಯ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಈ ಕಾರಣದಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಸಂಚಾರ ಪೊಲೀಸರ ಜತೆ ಅರವಿಂದ ಲಿಂಬಾವಳಿ ಪುತ್ರಿಯ ವಾಗ್ವಾದ: ವಿಡಿಯೋ ವೈರಲ್
ಎರಡೂ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸುವವರನ್ನು ಬಿಡುವುದಿಲ್ಲ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.