Advertisement

ಶಿವಮೊಗ್ಗ ಗಲಭೆ ಪ್ರಕರಣ: 62 ಜನರ ಬಂಧನ, ಡಿ.5ರವರೆಗೆ ಕರ್ಫ್ಯೂ ಮುಂದುವರಿಕೆ

12:16 PM Dec 04, 2020 | keerthan |

ಶಿವಮೊಗ್ಗ: ನಗರದಲ್ಲಿ ಗುರುವಾರ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 62 ಜನರನ್ನು ಬಂಧಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಎಸ್.ರವಿ ತಿಳಿಸಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸಂಪೂರ್ಣ ಹತೋಟಿಗೆ ಬಂದಿದೆ. ಶಾಂತಿ ನೆಲೆಸುತ್ತಿದೆ ಎಂದರು. ಘಟನೆಯಲ್ಲಿ19 ಮಂದಿ ಗಾಯಗೊಂಡಿದ್ದಾರೆ. ದೊಡ್ಡಪೇಟೆ ಮತ್ತು ಕೋಟೆ ‌ಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ನಾಗೇಶ್ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದರು.

ಈಗಾಗಲೇ 148 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವ ದುಷ್ಕರ್ಮಿಗಳನ್ನು ತಡೆಯಲು 9 ಕಡೆ ಚೆಕ್ ಪೋಸ್ಟ್ ಹಾಕಲಾಗಿದೆ.19 ಮೊಬೈಲ್ ಗಸ್ತು ವಾಹನ ಹಾಗೂ 22 ಚೀತಾ ವಾಹನಗಳು ನಗರದಾದ್ಯಂತ ಗಸ್ತು ತಿರುಗುತ್ತಿವೆ ಎಂದ ಅವರು ಮೂರು ಪ್ಯಾಟ್ರೋಲ್ ವಾಹನ ಗಸ್ತು ತಿರುಗುತ್ತಿವೆ. ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದಾವಣಗೆರೆ ವಲಯದ 1 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದರು.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಮುಸಲ್ಮಾನ್ ಗೂಂಡಾಗಿರಿ ನಡೆಯಲ್ಲ: ಈಶ್ವರಪ್ಪ ಕೆಂಡಾಮಂಡಲ

ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದ ಅವರು, ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ. ನಗರದಲ್ಲಿ ಶಾಂತಿ‌ ನೆಲೆಸಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

Advertisement

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಡಿ.5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವತ್ಯಯ ಆಗುವುದಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್ ಪಿ ಕೆ.ಎಂ ಶಾಂತರಾಜು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next