Advertisement

ಮೇ 7ರವರೆಗೆ ನಿಷೇಧಾಜ್ಞೆ ವಿಸ್ತರಣೆ: ಕಲಬುರಗಿ ಜಿಲ್ಲಾಧಿಕಾರಿ ಆದೇಶ

08:08 AM May 01, 2020 | keerthan |

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಭೀತಿ ಕಡಿಮೆಯಾಗದ ಹಿನ್ನೆಲೆಯಲ್ಲಿ ಮೇ‌ 7ರವರೆಗೆ ಸಿ‌ಆರ್ ಪಿಸಿ 1973 ಕಲಂ‌ 144 ರನ್ವಯ ನಿಷೇಧಾಜ್ಞೆಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

Advertisement

ಈಗಾಗಲೇ ಜಾರಿಯಲ್ಲಿರುವ ನಿಷೇಧಾಜ್ಞೆ ಇಂದು (ಏ.30) ರಾತ್ರಿ 8ಗಂಟೆಗೆ ಅಂತ್ಯಗೊಳಬೇಕಿತ್ತು.‌ ಆದರೆ, ದಿನದಿಂದ‌ ದಿನಕ್ಕೆ ಕೋವಿಡ್-19 ಸೋಂಕಿನ ಭೀತಿ ಹೆಚ್ಚುತ್ತಲೇ ಇದೆ. ಹೀಗಾಗಿ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ‌ನಿಟ್ಟಿನಲ್ಲಿ ಮತ್ತೆ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.‌

ನಿಷೇಧಾಜ್ಞೆಯನ್ನು ಮೇ 7ರವರೆಗೆ ಸಾರ್ವಜನಿಕರು‌ ಕಟ್ಟುನಿಟ್ಟಾಗಿ ಪಾಲಿಸಬೇಕು. ಅನಗತ್ಯವಾಗಿ ಓಡಾಡುವಂತಿಲ್ಲ.‌ ಧಾರ್ಮಿಕ ಹಾಗೂ ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಹಾಗೂ ಗುಂಪು-ಗುಂಪಾಗಿ ಒಂದೆಡೆ ಸೇರುವಂತಿಲ್ಲ‌ ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 52 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಲ್ಲಿ ಏಳು ಜನರು ಗುಣಮುಖರಾಗಿದ್ದು, ಐವರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next