Advertisement

ಮಂಗಳೂರು ನಗರಾದ್ಯಂತ ಡಿ.22ರವರೆಗೆ ಕರ್ಫ್ಯೂ ವಿಸ್ತರಣೆ

09:59 AM Dec 20, 2019 | Hari Prasad |

ಮಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪವನ್ನು ತಾಳಿದ ಬಳಿಕ ಮುಂಜಾಗರೂಕತಾ ಕ್ರಮವಾಗಿ ನಗರದ ಐದು ಪೊಲಿಸ್ ಠಾಣಾ ವ್ಯಾಪ್ತಿಗಳಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ಇದೀಗ ಮಂಗಳೂರು ನಗರಾದ್ಯಂತ ವಿಸ್ತರಣೆ ಮಾಡಲಾಗಿದೆ ಮತ್ತು ಡಿಸೆಂಬರ್ 22ರ ಆದಿತ್ಯವಾರದ ಮಧ್ಯರಾತ್ರಿಯವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ.

Advertisement

ಪ್ರಚೋದನಕಾರಿ ಸಂದೇಶಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳ ಮೂಲಕ ಹರಿದಾಡುತ್ತಾ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ವಿಟಿಯು ಪರೀಕ್ಷೆ ಮುಂದೂಡಿಕೆ
ಮಂಗಳೂರು ನಗರದಲ್ಲಿ ಕರ್ಫ್ಯೂ ಹೇರಿಕೆಯಾಗಿರುವುದರಿಂದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಾಗಿರುವುದರಿಂದ ವಿಶ್ವೇಶರಯ್ಯ ತಾಂತ್ರಿಕ ವಿದ್ಯಾನಿಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿಟಿಯು ಕುಲಸಚಿವ ಪ್ರೊಫೆಸರ್ ಸತೀಶ್ ಅಣ್ಣಿಗೇರಿ ಅವರು ಸೂಚನೆ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next