Advertisement

ಶಿವಮೊಗ್ಗದಲ್ಲಿ 2 ದಿನ ಕರ್ಫ್ಯೂ ವಿಸ್ತರಣೆ; ಶಾಲಾ -ಕಾಲೇಜುಗಳಿಗೆ ರಜೆ

06:50 PM Feb 22, 2022 | Team Udayavani |

ಶಿವಮೊಗ್ಗ: ಜಿಲ್ಲೆಯಾದ್ಯಂತ ಇನ್ನೆರಡು ದಿನ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಬುಧವಾರ ಬೆಳಗ್ಗೆವರೆಗೆ ಕರ್ಫ್ಯೂ ಇತ್ತು. ಆದರೆ ಕೆಲವು ಘಟನೆಗಳು ಹಿನ್ನೆಲೆ ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ : ಬಂಧಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ : ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್

ಕರ್ಫ್ಯೂ ಜಾರಿಯಲ್ಲಿ ಇರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು, ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ದೊಡ್ಡಪೇಟೆ, ಕೋಟೆ ಮತ್ತು ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next