Advertisement

ತತ್ ಕ್ಷಣದಿಂದ ಇಡೀ ಶ್ರೀಲಂಕಾದಲ್ಲಿ ಕರ್ಫ್ಯೂ ಜಾರಿ: ಪೊಲೀಸ್ ವಕ್ತಾರ

03:11 PM May 09, 2022 | Team Udayavani |

ಕೊಲಂಬೋ: ತತ್ ಕ್ಷಣದಿಂದ ಜಾರಿಗೆ ಬರುವಂತೆ ಇಡೀ ಶ್ರೀಲಂಕಾದಲ್ಲಿ ಕರ್ಫ್ಯೂ ಹೇರಲಾಗಿದೆ ಎಂದು ಪೊಲೀಸ್ ವಕ್ತಾರರು ಸೋಮವಾರ ಮಧ್ಯಾಹ್ನ ತಿಳಿಸಿದ್ದಾರೆ.

Advertisement

ಆರ್ಥಿಕವಾಗಿ ದಿವಾಳಿ ಹೊಂದಿರುವ ದ್ವೀಪರಾಷ್ಟ್ರದಲ್ಲಿ ಐದು ವಾರಗಳಲ್ಲಿ ಎರಡನೇ ಬಾರಿಗೆ ಶುಕ್ರವಾರ (ಮೇ 06) ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಅಧ್ಯಕ್ಷ ಗೊಟಬೊಯ ರಾಜಪಕ್ಸೆ ತುರ್ತು ಪರಿಸ್ಥಿತಿ ಘೋಷಿಸಿದ್ದರು.

ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಿ, ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು.

ಪ್ರಸ್ತುತ ರಾಜಪಕ್ಸೆ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು, ನಾರಿಕರು ಪಾರ್ಲಿಮೆಂಟ್ ಮುಂಭಾಗದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು. ಅಂಗಡಿ, ಮುಂಗಟ್ಟು, ಸಾರಿಗೆಯನ್ನು ಬಂದ್ ಮಾಡಿದ್ದು, ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next