Advertisement

ಮಂಗಳೂರು ನಗರದಲ್ಲಿ ಕರ್ಫ್ಯೂ ಜಾರಿ ; ಎಲ್ಲೆಲ್ಲಿ ಕರ್ಫ್ಯೂ? –ಇಲ್ಲಿದೆ ಮಾಹಿತಿ

09:53 AM Dec 20, 2019 | Hari Prasad |

ಮಂಗಳೂರು: ನಗರದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಉಲ್ಲಂಘಿಸಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಹೃದಯಭಾಗದಲ್ಲಿರುವ ಸ್ಟೇಟ್ ಬ್ಯಾಂಕ್ ವೃತ್ತದಲ್ಲಿರುವ ರಾವ್ ಆ್ಯಂಡ್ ರಾವ್ ವೃತ್ತದ ಬಳಿ ಪ್ರತಿಭಟನೆಯನ್ನು ನಡೆಸುತ್ತಿದ್ದ ಪ್ರತಿಭಟನಾಕಾರರ ಗುಂಪಿನ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

Advertisement

ಪ್ರತಿಭಟನಾಕಾರರು ಇದಕ್ಕೂ ಜಗ್ಗದಿದ್ದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು. ಬಳಿಕ ನಗರದ ಹಂಪನಕಟ್ಟೆ, ಬಂದರು ಪ್ರದೇಶ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೇ ಇದ್ದ ಸಂದರ್ಭದಲ್ಲಿ ಈ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿ ಮಂಗಳೂರು ಪೊಲೀಸ್ ಆಯುಕ್ತರಾಗಿರುವ ಡಾ. ಪಿ.ಎಸ್. ಹರ್ಷ ಐ.ಪಿ.ಎಸ್. ಅವರು ಆದೇಶ ಹೊರಡಿಸಿದ್ದಾರೆ.

ಮಂಗಳೂರಿನ ಕೇಂದ್ರ ಉಪವಿಭಾಗ ವ್ಯಾಪ್ತಿಗೆ ಬರುವ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್ 20ರ ಮಧ್ಯರಾತ್ರಿವರೆಗೆ ಕರ್ಫ್ಯೂ ವಿಧಿಸಲಾಗಿದೆ. ಬಂದರು, ಪಾಂಡೇಶ್ವರ, ಉರ್ವ, ಬರ್ಕೆ ಮತ್ತು ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಮೂಲಗಳ ಮಾಹಿತಿ ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next