Advertisement

ನಾಳೆಯಿಂದ ಜಿಲ್ಲೆಯಲ್ಲಿ ಕರ್ಫ್ಯೂ ಕೊಂಚ ಸಡಿಲಿಕೆ

05:49 PM Jun 06, 2021 | Team Udayavani |

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಖಚಿತತೆ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಜೂ. 7ರಿಂದ ಜಿಲ್ಲೆಯಲ್ಲಿ ಕರ್ಫ್ಯೂ ನಿಯಮಗಳಲ್ಲಿ ಅಲ್ಪ ವಿನಾಯಿತ ನೀಡುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

Advertisement

ಸರ್ಕ್ಯೂಟ್‌ ಹೌಸ್‌ನಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪೊಲೀಸ್‌ ಆಯುಕ್ತ ಲಾಭೂ ರಾಮ, ಜಿಪಂ ಸಿಇಒ ಡಾ| ಬಿ. ಸುಶೀಲಾ, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ರಾಜ್ಯ ಸರಕಾರ ಜೂ. 14ರ ವರೆಗೆ ಕರ್ಫ್ಯೂ ಮುಂದುವರಿಸಲು ಸೂಚಿಸಿದೆ. ಸದ್ಯ ಹಾಲು, ತರಕಾರಿ ಸೇವೆಗಳಿಗೆ ಮಾತ್ರ ಬೆಳಗ್ಗೆ 6ರಿಂದ 8 ಗಂಟೆ ವರೆಗೆ ಅವಕಾಶವಿದೆ. ಈ ಸಮಯವನ್ನು ಬೆಳಗ್ಗೆ 10 ಗಂಟೆ ವರೆಗೆ ವಿಸ್ತರಿಸಿ ಹಾಲು, ತರಕಾರಿ, ಕಿರಾಣಿ ಅಂಗಡಿ, ಹೋಟೆಲ್‌ ಹಾಗೂ ಮದ್ಯದ ಅಂಗಡಿಗಳಲ್ಲಿ ಪಾರ್ಸಲ್‌ ಸೇವೆಗೆ ಅವಕಾಶ ನೀಡಿ. ಹೋಟೆಲ್‌ಗ‌ಳ ಮೂಲಕ ಹೋಮ್‌ ಡೆಲಿವರಿಗೆ ರಾತ್ರಿ 8 ಗಂಟೆ ವರೆಗೆ ಸಮಯಾವಕಾಶ ನೀಡುವಂತೆ ಜಿಲ್ಲಾ ಧಿಕಾರಿಗೆ ಸಚಿವ ಜಗದೀಶ ಶೆಟ್ಟರ ಸೂಚಿಸಿದರು.

ಗ್ರಾಮೀಣ ಭಾಗಗಳಲ್ಲಿ ಕೋವಿಡ್‌ ಲಸಿಕೆ ಕಾರ್ಯ ಚುರುಕುಗೊಳ್ಳಬೇಕು. ಸರಕಾರದ ಪರಿಷ್ಕೃತ ಆದೇಶದಂತೆ ಆದ್ಯತೆ ಮತ್ತು ದುರ್ಬಲ ವರ್ಗದವರಿಗೆ ಕಡ್ಡಾಯವಾಗಿ ಲಸಿಕೆ ನೀಡಲು ಕ್ರಮಕೈಗೊಳ್ಳುವಂತೆ ಅ ಧಿಕಾರಿಗಳಿಗೆ ಸೂಚಿಸಲಾಯಿತು. ವರ್ತುಲ ರಸ್ತೆ ಕಾಮಗಾರಿ ತ್ವರಿತ ರೀತಿಯಲ್ಲಿ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‌ ಗಳಿಗೆ ಸೂಚಿಸಲಾಯಿತು.

ಕಿಮ್ಸ್‌ ಆವರಣದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುವ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಕಿಮ್ಸ್‌ಗೆ ಹಸ್ತಾಂತರಿಸುವಂತೆ ನಿರ್ದೇಶನ ನೀಡಲಾಯಿತು. ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಯಶವಂತ ಮದೀನಕರ ಸೇರಿದಂತೆ ಇತರೆ ಅ ಧಿಕಾರಿಗಳು ಇದ್ದರು.

Advertisement

ಪರಿಹಾರ ವಿತರಣೆ ಪೂರ್ಣ: ಜಿಲ್ಲೆಯಲ್ಲಿ ಬೆಳೆ ವಿಮೆ ಮತ್ತು ಪರಿಹಾರ ಕಾರ್ಯಪೂರ್ಣಗೊಂಡಿದೆ. ತಾಂತ್ರಿಕ ಕಾರಣಗಳಿಂದ ವಿಮೆ ಲಭಿಸದವರ ವಿವರ ಪಡೆಯಲಾಗಿದೆ. ಆಯಾ ತಾಲೂಕು ಮಟ್ಟದ ಅಧಿ ಕಾರಿಗಳು ಸಮಸ್ಯೆ ಬಗೆಹರಿಸಲಿದ್ದಾರೆ. ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಹಣ್ಣು ಬೆಳೆಗಾರರಿಗೆ 1,08,64,487 ರೂ. ಹಾಗೂ ತರಕಾರಿ ಬೆಳೆಗಾರರಿಗೆ 55,400 ರೂ. ಬಿಡುಗಡೆಯಾಗಿದೆ. ಹೂ ಬೆಳೆಗಾರರಿಗೆ 10,73,529ರೂ. ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next