Advertisement

370ನೇ ವಿಧಿ ರದ್ದು-ಮೊದಲ ವರ್ಷಾಚರಣೆ; ಆಗಸ್ಟ್ 4 ಮತ್ತು 5ರಂದು ಶ್ರೀನಗರದಲ್ಲಿ ಕರ್ಫ್ಯೂ ಜಾರಿ

08:22 AM Aug 04, 2020 | Nagendra Trasi |

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ರದ್ದುಪಡಿಸಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 4 ಮತ್ತು 5ರಂದು ಶ್ರೀನಗರದಲ್ಲಿ ಕರ್ಫ್ಯೂ ಜಾರಿಗೊಳಿಸಿರುವುದಾಗಿ ವರದಿ ತಿಳಿಸಿದೆ.

Advertisement

370ನೇ ವಿಧಿಯನ್ನು ರದ್ದುಪಡಿಸಿದ ಘಟನೆಗೆ ಮೊದಲ ವರ್ಷಾಚರಣೆ ನಿಟ್ಟಿನಲ್ಲಿ ಶ್ರೀನಗರ ಆಡಳಿತ ವರ್ಗ ಈ ನಿರ್ಧಾರ ತೆಗೆದುಕೊಂಡಿದೆ. ಶ್ರೀನಗರದ ಡೆಪ್ಯುಟಿ ಕಮಿಷನರ್ ಬಿಡುಗಡೆ ಮಾಡಿರುವ ಆದೇಶದಲ್ಲಿ, ಆಗಸ್ಟ್ 5ರಂದು (2020) ಕಪ್ಪು ದಿನಾಚರಣೆ ಆಚರಿಸಲು ಪ್ರತ್ಯೇಕತಾವಾದಿಗಳು ಹಾಗೂ ಪಾಕ್ ಪ್ರಾಯೋಜಿತ ಸಂಘಟನೆಗಳು ಸಿದ್ಧತೆ ನಡೆಸುತ್ತಿವೆ ಎಂಬ ಸರಣಿ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

ಅಲ್ಲದೇ 370ನೇ ವಿಧಿ ರದ್ದುಪಡಿಸಿರುವ ದಿನವನ್ನು ಕಪ್ಪು ದಿನವನ್ನಾಗಿ ಆಚರಿಸಿ ನಡೆಸುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಬಹುದು ಎಂಬ ಮಾಹಿತಿಯನ್ನು ತಳ್ಳಿಹಾಕುವಂತಿಲ್ಲ. ಗಲಭೆ ನಡೆದರೆ ಸಾರ್ವಜನಿಕ ಜೀವನ ಹಾಗೂ ಆಸ್ತಿ-ಪಾಸ್ತಿ ನಷ್ಟವಾಗಬಹುದು ಎಂದು ಶ್ರೀನಗರ ಜಿಲ್ಲಾಡಳಿತ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next