Advertisement

ಅಮೆರಿಕದಲ್ಲಿ ಭುಗಿಲೆದ್ದ ಹಿಂಸಾಚಾರ; ಚಿಕಾಗೋ ಸೇರಿ ಪ್ರಮುಖ ನಗರಗಳಲ್ಲಿ ಕರ್ಫ್ಯೂ ಜಾರಿ

02:30 PM May 31, 2020 | Nagendra Trasi |

ವಾಷಿಂಗ್ಟನ್:ಕಪ್ಪು ಜನಾಂಗದ ಜಾರ್ಜ್ ಫ್ಲಾಯ್ಡ್ ಎಂಬಾತನನ್ನು ಬಂಧಿಸಿದ್ದ ಪೊಲೀಸ್ ಅಧಿಕಾರಿ ಡೆರಿಕ್ ಚವಿನ್ ವಿನಾ ಕಾರಣ ಹಿಂಸೆ ನೀಡಿ ಆತನ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿ ಮಿನ್ನಿಯಾಪೊಲೀಸ್ ನಲ್ಲಿ ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ತೀವ್ರ ಹಿಂಸಾಚಾರಕ್ಕೆ ತಿರುಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಕಳೆದ ಶನಿವಾರದಿಂದ ಆರಂಭವಾಗಿದ್ದ ಪ್ರತಿಭಟನೆ ಇದೀಗ ಅಮೆರಿಕದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಏಕಾಏಕಿ ಪ್ರತಿಭಟನಾಕಾರರು ಬೀದಿಗಿಳಿದು ಪೊಲೀಸರ ಕಾರುಗಳಿಗೆ ಬೆಂಕಿ ಹಚ್ಚಿದ್ದರು, ಅಂಗಡಿಗಳನ್ನು ಲೂಟಿಗೈದಿದ್ದರು. ಈ ವೇಳೆ ಅಟ್ಲಾಂಟಾ ಮತ್ತು ಲಾಸ್ ಏಂಜಲೀಸ್ ನಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿತ್ತು.

ಮಿನ್ನಿಯಾಪೊಲೀಸ್ ನಲ್ಲಿ ಆರಂಭವಾದ ಜನಾಂಗೀಯ ಪ್ರತಿಭಟನೆ ಅಮೆರಿಕದ ಪ್ರಮುಖ ನಗರವಾದ ಲಾಸ್ ಏಂಜಲೀಸ್, ಚಿಗಾಕೋ ಸೇರಿದಂತೆ ಹಲವು ನಗರಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ಹಿಂಸಾರೂಪ ತಳೆದ ಹಿನ್ನೆಲೆಯಲ್ಲಿ ಅಮೆರಿಕದ ಪ್ರಮುಖ ನಗರಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಯಾರೂ ಮನೆಯಿಂದ ಹೊರಬರಬಾರದು ಎಂದು ಪೊಲೀಸರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪ್ರತಿಭಟನೆ ತೀವ್ರ ಸ್ವರೂಪ ಪಡೆದ ನಿಟ್ಟಿನಲ್ಲಿ ಹಿಂಸಾಚಾರ ತಡೆಗಟ್ಟಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳು ನ್ಯಾಷನಲ್ ಗಾರ್ಡ್ ಅನ್ನು ಕರೆಸಲು ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next