Advertisement
ಮಂಡ್ಯಕಳೆದ ಹದಿನೈದು ದಿನಗಳಿಂದ ಬಿಸಿಯೇರುತ್ತಿರುವ ಕದನ ಕಣ ಸೋಮವಾರದಿಂದ ಮತ್ತಷ್ಟು ಹಾಟ್ ಆಗಲಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಒಂದು ಹಂತದ ಪ್ರಚಾರ ಮುಗಿಸಿಯಾಗಿದೆ. ಸೋಮವಾರ ಜೆಡಿಎಸ್ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಕ್ಷೇತ್ರದಲ್ಲಿ ಈಗಾಗಲೇ ಜೆಡಿಎಸ್ ನಿಂದ ರೇವಣ್ಣ ಪುತ್ರ ಪ್ರಜ್ವಲ್ ಅವರು ನಾಮಪತ್ರ ಸಲ್ಲಿಸಿಯಾಗಿದೆ. ದೇವೇಗೌಡರು ತಮ್ಮ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟ ಕಾರಣಕ್ಕೆ ರಾಜ್ಯದ ಗಮನ ಸೆಳೆದಿರುವ ಈ ಕ್ಷೇತ್ರದಲ್ಲಿ ರಾಜಕೀಯ ಬಿಸಿ ಏರುತ್ತಲೇ ಇದೆ. ಮಾಜಿ ಸಚಿವ ಎ. ಮಂಜು ಈಗ ಬಿಜೆಪಿ ಸೇರಿಕೊಂಡು ಕದನ ಕಣದ ರಂಗೇರಿಸಿದ್ದಾರೆ. ಸೋಮವಾರ ಮಂಜು ಅವರು ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮೊದಲು ಕಾರ್ಯಕರ್ತರನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್ ಮತ್ತು ಬಿಜೆಪಿ ಮುಖಂಡರು ಭಾಷಣ ಮಾಡುವರು. ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಸೋಮವಾರ ಮತ್ತೂಂದು ಸೆಟ್ ನಾಮಪತ್ರ ಸಲ್ಲಿಸುವರು.
Related Articles
ತುಮಕೂರು
ತುಮಕೂರು ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ದೇವೇಗೌಡ ಸ್ಪರ್ಧಿಸುತ್ತಿರುವುದರಿಂದ ಈ ಕ್ಷೇತ್ರ ಇಡೀ ದೇಶದ ಗಮನ ಸೆಳೆಯುತ್ತಿದೆ. ಬಿಜೆಪಿ
ಅಭ್ಯರ್ಥಿ ಜಿ.ಎಸ್. ಬಸವರಾಜ್ ಅವರು ಪೈಪೋಟಿ ನೀಡಲಿದ್ದಾರೆ. ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಆಕ್ರೋಶಗೊಂಡಿರುವ ಹಾಲಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಸೋಮವಾರ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ದೇವೇಗೌಡರನ್ನು ಗೆಲ್ಲಿಸುವ ಹೊಣೆ ಹೊತ್ತಿರುವ ಡಿಸಿಎಂ ಡಾ| ಜಿ. ಪರಮೇಶ್ವರ್, ದೇವೇ ಗೌಡರು ಈ ಕ್ಷೇತ್ರವನ್ನು ಬಿಟ್ಟು ಕೊಡುವಂತೆ ಇನ್ನೊಮ್ಮೆ ಮನವಿ ಮಾಡಿರುವುದು ಕುತೂಹಲಕಾರಿ ಬೆಳವಣಿಗೆ. ಮುದ್ದಹನುಮೇಗೌಡ ಬೆಂಬಲಿತ ಕಾಂಗ್ರೆಸ್ ಕಾರ್ಯಕರ್ತರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಕಲಬುರಗಿರಾಜ್ಯದಲ್ಲಿಯೇ ಹೈವೋಲ್ಟೆಜ್ ಕ್ಷೇತ್ರವಾಗಿರುವ ಕಲಬುರಗಿ ಕ್ಷೇತ್ರದಲ್ಲಿ ಚುನಾವಣೆ ಕಾವು ಬಿಸಿಲಿನಂತೆ ಪ್ರಖರಗೊಳ್ಳುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ್ ರವಿವಾರ ಕ್ಷೇತ್ರದಲ್ಲಿರದೆ ಇದ್ದರೂ ಕಾರ್ಯಕರ್ತರ ಮೂಲಕ ಪ್ರಚಾರ ಚುರುಕುಗೊಳಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಟಿಕೆಟ್ ಪಟ್ಟಿ ಅಂತಿಮಗೊಳಿಸುವುದರ ಜತೆಗೆ ಮಹಾರಾಷ್ಟ್ರದ ಎಐಸಿಸಿ ಉಸ್ತುವಾರಿ ಇರುವುದರಿಂದ ಆ ರಾಜ್ಯದ ಟಿಕೆಟ್ ಪಟ್ಟಿ ಅಂತಿಮಗೊಳಿಸಲು ದಿಲ್ಲಿಯಲ್ಲಿ ಬಿಡಾರ ಹೂಡಿದ್ದಾರೆ. ಬಿಜೆಪಿ ಅಭ್ಯರ್ಥಿ, ಶಾಸಕ ಡಾ| ಉಮೇಶ ಜಾಧವ್ ಅವರಿಗೆ ಮಾ. 24 ಜನ್ಮ ದಿನ. ಹೀಗಾಗಿ ಬೆಂಗಳೂರಿನಲ್ಲಿಯೇ ಸರಳವಾಗಿ ಜನ್ಮದಿನ ಆಚರಿಸಿಕೊಂಡರು. ಬೆಂಗಳೂರು ದಕ್ಷಿಣ
ಪ್ರತಿ ಸಲವೂ ತುರುಸಿನ ಸ್ಪರ್ಧೆಗೆ ಹೆಸರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರ ಈ ಸಲ ಮತ್ತಷ್ಟು ಕುತೂಹಲ ಕೆರಳಿಸಿದೆ. ಕೇಂದ್ರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್ ನಿಧನದ ಅನಂತರ ಅವರ ಪತ್ನಿ ತೇಜಸ್ವಿನಿ ಇಲ್ಲಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಬಿಜೆಪಿಯ ಮೊದಲ ಪಟ್ಟಿಯಲ್ಲಿ ಇವರ ಹೆಸರಿಲ್ಲದ ಕಾರಣ ಕುತೂಹಲ ಮತ್ತಷ್ಟು ಕೆರಳಿತು. ಈ ನಡುವೆ, ಸ್ವತಃ ಪ್ರಧಾನಿ ಮೋದಿ ಅವರೇ ಇಲ್ಲಿ ಕಣಕ್ಕಿಳಿಯುತ್ತಾರೆ ಎಂಬ ವರದಿಗಳು ಈ ಕ್ಷೇತ್ರವನ್ನು ಮತ್ತಷ್ಟು ಹಾಟ್ ಮಾಡಿದೆ. ಮೋದಿ ಬದಲು ಮತ್ತೋರ್ವ ಸರ್ ಪ್ರೈಸ್ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ರವಿವಾರ ಹರಿದಾಡುತಿತ್ತು. ಈ ಬೆನ್ನಲ್ಲೇ, ಕಾಂಗ್ರೆಸ್ ರವಿವಾರ ಬಿ.ಕೆ. ಹರಿಪ್ರಸಾದ್ ಅವರನ್ನು ಕಣಕ್ಕಿಳಿಸಿದೆ.