Advertisement

ಮನುಷ್ಯರನ್ನಾಗಿಸುವಲ್ಲಿ ಪ್ರಸ್ತುತ ಶಿಕ್ಷಣ ವಿಫ‌ಲ: ಆರಗ ಜ್ಞಾನೇಂದ್ರ

06:28 PM Oct 22, 2021 | Team Udayavani |

ಬೆಂಗಳೂರು: ಮೌಲ್ಯಯುತ ಶಿಕ್ಷಣ ನೀಡಿ ವಿದ್ಯಾವಂತರನ್ನು ಮನುಷ್ಯರನ್ನಾ ಗಿಸುವಲ್ಲಿ ಪ್ರಸ್ತುತ ಶಿಕ್ಷಣ ವಿಫ‌ಲವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದರು.

Advertisement

ಕಳೆದ ಎರಡು ವರ್ಷದಲ್ಲಿ ಕೊರೊನಾ ಸೇರಿದಂತೆ ವಿವಿಧ ಕಾರಣಗಳಿಂದ ಸಾವನ್ನಪ್ಪಿದ ಪೊಲೀಸರಿಗೆ ರಾಜ್ಯ ಪೊಲೀಸ್‌ ಇಲಾಖೆ ವತಿ ಯಿಂದ ಗುರುವಾರ ಚಿತ್ರಕಲಾ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ “ಸ್ಮರಣಾಂಜಲಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರು ತಾವು ಏನು ಮಾಡಿ ದರೂ ನಡೆಯುತ್ತದೆ ಎಂಬ ಮನಸ್ಥಿತಿ ಯಲ್ಲಿದ್ದಾರೆ. ಹೀಗಾಗಿಯೇ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಮನಸ್ಥಿತಿ ಬದಲಾಯಿಸಿಕೊಳ್ಳು ವುದು ಉತ್ತಮ ಎಂದು ಹೇಳಿದರು. ಕಳೆದ ವರ್ಷ ಕೊರೊನಾ ಸೇರಿದಂತೆ ವಿವಿಧ ಕಾರಣಗಳಿಂದ ಒಟ್ಟಾರೆ 172 ಮಂದಿ ಮತ್ತು ಈ ವರ್ಷ 16 ಮಂದಿ ಪೊಲೀಸ್‌ ಸಿಬ್ಬಂದಿ ಮೃತಪಟ್ಟಿದ್ದಾರೆ.

ಇವರ ಕುಟುಂಬಗಳಿಗೆ ಸರ್ಕಾರವು ಪರಿಹಾರ ಮತ್ತು ಉದ್ಯೋಗ ನೀಡಲಿದೆ. ಆದರೂ ಕುಟುಂಬದ ನೋವ ನ್ನು ಭರಿಸಲು ಸಾಧ್ಯವಾಗುವು ದಿಲ್ಲ ಎಂದು ಸಮಾಧಾನದ ಮಾತುಗಳನ್ನು ಆಡಿದರು. ಪೊಲೀಸ್‌ ಸಿಬ್ಬಂದಿ ನೆಮ್ಮದಿ ಯಿಂದ ಇರಲೆಂದು ಈಗಾಗಲೇ 11 ಸಾವಿರ ಮನೆಗಳನ್ನು ನಿರ್ಮಿಸಿದ್ದೇವೆ. ಮತ್ತೆ 10 ಸಾವಿರ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, 2 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:- ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

Advertisement

ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಮಾತನಾಡಿ, ಯಾವುದೇ ಮನೆಯಲ್ಲಿ ಸಾವು ಸಂಭವಿಸಬಾರದು. ಆದರೂ ಸಂಭವಿಸುವುದನ್ನು ತಡೆಯಲು ಸಾಧ್ಯವಿಲ್ಲ. ಹೀಗೆ ಅಕಾಲಿಕವಾಗಿ ಮೃತಪಟ್ಟಿರುವ ಪೊಲೀಸ್‌ ಸಿಬ್ಬಂದಿ ಕುಟುಂಬಕ್ಕೆ ಸಾಂತ್ವನ ಹೇಳಲು ಕಾರ್ಯಕ್ರಮ ಆಯೋಜಿಸಿ ದ್ದೇವೆ. ಕಳೆದ ಎರಡು ವರ್ಷಗಳಲ್ಲಿ ಮೃತಪಟ್ಟಿರುವ ಎಲ್ಲಾ ಪೊಲೀಸರ ಭಾವಚಿತ್ರಮತ್ತು ಕರ್ತವ್ಯದ ಮಾಹಿತಿಯನ್ನು ಒಳಗೊಂಡ ಫೋಟೋಗಳನ್ನು ಮಾಡಿಸಲಾಗಿದೆ.

ಅದನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಮೂಲಕ ಮೃತರ ಕುಟುಂಬಕ್ಕೆ ಕಳುಹಿಸಿಕೊಡಲಾಗುತ್ತದೆ ಎಂದು ಹೇಳಿದರು. ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ ರಜನೀಶ್‌ ಗೋಯಲ್‌, ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಸಂಚಾರಿ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್‌.ರವಿಕಾಂತೇಗೌಡ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next