Advertisement

Ripponpet; ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ ಕರೆಂಟ್ ಶಾಕ್; ವಿದ್ಯಾರ್ಥಿ ಸಾವು

10:33 AM Jul 12, 2024 | keerthan |

ಶಿವಮೊಗ್ಗ: ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.

Advertisement

ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ. ಶುಕ್ರವಾರ ಬೆಳಗಿನಜಾವ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ.

ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದ ಯುವಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ.

ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ.

Advertisement

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next