ಮಂಗಳೂರು : ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜೂನ್ 26 ರಂದು ಮತ್ತೊಂದು ಭಾರಿ ಚಿನ್ನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದು, ಕಾಸರಗೋಡು ಮೂಲದ ಪುರುಷ ಪ್ರಯಾಣಿಕನಿಂದ ಬರೋಬ್ಬರಿ 1.163 ಕೆಜಿ ತೂಕದ 24 ಕ್ಯಾರೆಟ್ ಶುದ್ಧತೆಯ 60.24 ಲಕ್ಷ ರೂ.ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಯಾಣಿಕನು ದುಬೈನಿಂದ ಇಂಡಿಗೋ ವಿಮಾನದಲ್ಲಿ ಜೂನ್ 26 ರಂದು ಬಂದಿಳಿದಿದ್ದು, ಚಿನ್ನವನ್ನು ಪೇಸ್ಟ್ ರೂಪದಲ್ಲಿ ಘನ ಗಮ್ನೊಂದಿಗೆ ಬೆರೆಸಿ 4 ಅಂಡಾಕಾರದ ಪ್ಯಾಕೆಟ್ಗಳಾಗಿ ಮಾಡಿ ಗುದನಾಳದಲ್ಲಿ ಮರೆಮಾದಿಟ್ಟಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ವ್ಯಕ್ತಿಯನ್ನು ಬಂಧಿಸಲಾಗಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ.