Advertisement

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ

11:45 AM Oct 30, 2021 | Team Udayavani |

ದೇವನಹಳ್ಳಿ: ಅಕ್ರಮ ಮದ್ಯ ಮಾರಾಟ ಮಾಡುವುದು ಕಾನೂನು ಬಾಹಿರವಾಗಿದೆ. ಏನೇ ಸಮಸ್ಯೆಗಳು ಇದ್ದರೆ ಠಾಣಾಧಿಕಾರಿಯವರನ್ನು ಸಂಪರ್ಕಿಸಬಹುದು. ಕಾನೂನು ಬಾಹಿರ ಚಟುವಟಿಕೆಗಳು ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ಎಲ್ಲಿಯಾದರೂ ಕಂಡುಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ವಿಶ್ವನಾಥಪುರ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಟಿ.ವೆಂಕಟೇಶ್‌ ತಿಳಿಸಿದರು.

Advertisement

ತಾಲೂಕಿನ ವಿಶ್ವನಾಥಪುರ ಪೊಲೀಸ್‌ ಠಾಣೆಯಲ್ಲಿ ಹಮ್ಮಿಕೊಂಡಿದ್ದ ದಲಿತರ ಕುಂದು-ಕೊರತೆ ಸಭೆಯಲ್ಲಿ ಮಾತನಾಡಿದ ಅವರು, ದಲಿತರ ಸಮಸ್ಯೆಗಳಿಗೆ ಸ್ಪಂದಿ ಸಲು ಪೊಲೀಸ್‌ ಇಲಾಖೆ ಸದಾ ಸಿದ್ಧವಿದೆ. ತಮ್ಮ ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಸುವ ಪ್ರಯತ್ನ ಮಾಡಲಾಗುತ್ತದೆ ಎಲ್ಲರೂ ಕಾನೂನಿಗೆ ತಲೆಬಾಗಬೇಕು.

ಕಾನೂನು ಇರುವುದೇ ರಕ್ಷಣೆಗಾಗಿ, ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿರುವ ದೂರುಗಳಿಗೆ ಸ್ಪಂದಿಸಿ ಈಗಾಗಲೇ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲು ಮಾಡಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ:- ಶಕಿಬ್, ಲಸಿತ್ ಮಾಲಿಂಗ ದಾಖಲೆ ಮುರಿದ ರಶೀದ್ ಖಾನ್

 ಮದ್ಯ ಮಾರಾಟಕ್ಕೆ ಕಡಿವಾಣ: ಕಾನೂನನ್ನು ಯಾರು ಕೈಗೆತ್ತಿಕೊಳ್ಳಬಾರದು. ದ್ವೇಷ, ಅಸೊಯೆಯನ್ನು ಬಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಒಮ್ಮತದಿಂದ ಶಾಂತಿಯುತವಾಗಿ ಬಾಳಬೇಕು. ಈಗಾಗಲೇ ಬೆಟ್ಟೇನಹಳ್ಳಿ, ಅರದೇಶನಹಳ್ಳಿ, ಸಿಂಗ್ರಹಳ್ಳಿ, ಸಾವಕನಹಳ್ಳಿ, ಕಾರಹಳ್ಳಿ ಸೇರಿದಂತೆ ಇತರೆ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲಾಗಿದೆ.

Advertisement

ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ ಬಗೆಹರಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ಸಲಹೆ ನೀಡಿದರು. ದಲಿತ ಮುಖಂಡರಿಂದ ಸಮಸ್ಯೆಗಳ ಅಹವಾಲು ಸ್ವೀಕರಿಸಿದರು. ಮುಂದಿನ ದಿನಗಳಲ್ಲಿ ದಲಿತ ಗ್ರಾಮಗಳಿಗೆ ಹೋಗಿ ಸ್ಥಳದಲ್ಲಿಯೇ ಸಭೆಯನ್ನು ನಡೆಸುವಂತೆ ತೀರ್ಮಾನಿಸಲಾಯಿತು. ಪ್ರೋಬೆಷನರಿ ಸಬ್‌ಇನ್ಸ್‌ಪೆಕ್ಟರ್‌ ಸುನಿಲ್‌ ಕುಮಾರ್‌, ಪೊಲೀಸ್‌ ಸಿಬ್ಬಂದಿ, ದಲಿತ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next