Advertisement
ಅಲ್ಲದೆ ಮಹಿಳೆಯರ ಮಾಂಗಲ್ಯ, ಓಲೆಗಳನ್ನು ಬಿಚ್ಚಿಸಿ ಪರೀಕ್ಷಿಸಲಾಗಿದೆ. ಅಲ್ಲದೆ ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದ ಅಭ್ಯರ್ಥಿ ಗಳನ್ನು ಕೇಂದ್ರದ ಹೊರಗಡೆ ನಿಲ್ಲಿಸಲಾಗಿದೆ. ಮಹಿಳೆಯರ ಮಾಂಗಲ್ಯ, ಕೊರಳಲ್ಲಿನ ಆಭರಣದ ಚೈನ್ ಹಾಗೂ ಕಿವಿಯೋಲೆ ಬಿಚ್ಚಿ ಪರೀಕ್ಷೆ ಮಾಡಲಾಗಿದೆ.
Related Articles
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ (ವಿಎಒ) 1 ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ನಡೆಸಿದ ಲಿಖಿತ ಪರೀಕ್ಷೆ ಗೆ ಶೇ. 80ರಷ್ಟು ಮಂದಿ ಹಾಜರಾಗಿದ್ದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
Advertisement
ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆಯಿತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ. 80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ವಿವರಿಸಿದರು. ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳನ್ನು ಅತಿ ಸೂಕ್ಷ್ಮಎಂದು ಪರಿಗಣಿಸಿದ್ದ ಕಾರಣ ಆ ಜಿಲ್ಲೆಗಳಲ್ಲಿ ಹೆಚ್ಚಿನ ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದರು.