Advertisement

Congress: ಲೋಕಸಭೆ ಚುನಾವಣೆ ಕಾರ್ಯತಂತ್ರ ಚರ್ಚೆಗೆ 21ಕ್ಕೆ ಸಿಡಬ್ಲ್ಯೂಸಿ ಸಭೆ

08:13 PM Dec 17, 2023 | Pranav MS |

ನವದೆಹಲಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ ) ಸಭೆ ಡಿ.21ರಂದು ನವದೆಹಲಿಯಲ್ಲಿ ನಡೆಯಲಿದೆ. 2024ರ ಏಪ್ರಿಲ್‌-ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ನಿಟ್ಟಿನಲ್ಲಿ ಪಕ್ಷದ ಕೈಗೊಳ್ಳಬೇಕಾದ ರಣತಂತ್ರಗಳ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಸಭೆ ಕರೆದಿದ್ದಾರೆ.

Advertisement

ಡಿ.19ರಂದು ಪ್ರತಿಪಕ್ಷಗಳ ಒಕ್ಕೂಟ ಐಎನ್‌ಡಿಐಎ ಸಭೆ ನಡೆಯಲಿದ್ದು, ಆ ಬಳಿಕ ಮುಂದಿನ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಕಾರ್ಯ ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಡಿ.21ರ ಸಭೆಯಲ್ಲಿ ಪ್ರಧಾನವಾಗಿ ಚರ್ಚಿಸಲಾಗುತ್ತದೆ. ಮುಂದಿನ ತಿಂಗಳು ವಯನಾಡ್‌ ಸಂಸದ ರಾಹುಲ್‌ ಗಾಂಧಿ ಅವರು ಕೈಗೊಳ್ಳಲು ಉದ್ದೇಶಿಸಿರುವ ಎರಡನೇ ಆವೃತ್ತಿಯ ಭಾರತ್‌ ಜೋಡೋ ಯಾತ್ರೆ, ನಿರುದ್ಯೋಗ ಸಮಸ್ಯೆ, ಬೆಲೆ ಏರಿಕೆ, ಮಿತ್ರ ಪಕ್ಷಗಳ ಜತೆಗೆ ಸ್ಥಾನ ಹೊಂದಾಣಿಕೆ ಬಗ್ಗೆಯೂ ಸಿಡಬ್ಲ್ಯೂಸಿ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಗಳು ಇವೆ.

Advertisement

Udayavani is now on Telegram. Click here to join our channel and stay updated with the latest news.

Next