Advertisement

ಸುಶೀಲಾ, ವಿಜಯ್‌ಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಅಭಿನಂದನೆ

11:09 PM Aug 02, 2022 | Team Udayavani |

ಹೊಸದಿಲ್ಲಿ: ಕಾಮನ್‌ವೆಲ್ತ್‌ ಗೇಮ್ಸ್‌ನ ಜೂಡೋ ಸ್ಪರ್ಧೆಯಲ್ಲಿ ಅನುಕ್ರಮವಾಗಿ ಬೆಳ್ಳಿ ಮತ್ತು ಕಂಚು ಜಯಿಸಿದ ಸುಶೀಲಾ ದೇವಿ ಮತ್ತು ವಿಜಯ್‌ ಕುಮಾರ್‌ ಯಾದವ್‌ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

Advertisement

ನಿಮ್ಮ ಪ್ರಭಾವಶಾಲಿ ಪ್ರದರ್ಶನವು ನಿಮಗೆ ಅಸಂಖ್ಯಾತ ಅಭಿಮಾನಿಗಳನ್ನು ಪ್ರೇರೇಪಿಸಿದೆ. ಭಾರತ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ ಎಂದು ಮುರ್ಮು ಟ್ವೀಟ್‌ ಮಾಡಿದ್ದಾರೆ.

ಬೆಳ್ಳಿ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರು ಗಮನಾರ್ಹ ಕೌಶಲ ಪ್ರದರ್ಶಿಸಿದ್ದಾರೆಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next