Advertisement

ಮುಂದುವರೆದ ಭಾರತದ ಪದಕ ಬೇಟೆ ; ಜೂಡೋದಲ್ಲಿ ಬೆಳ್ಳಿ ಗೆದ್ದ ತುಲಿಕಾ ಮಾನ್‌

11:49 AM Aug 04, 2022 | Team Udayavani |

ಬರ್ಮಿಂಗ್‌ಹ್ಯಾಮ್ :‌ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದೆ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತದ ತುಲಿಕಾ ಮಾನ್ ಮಹಿಳಾ ಜೂಡೋ 78 ಕೆಜಿ ವಿಭಾಗದಲ್ಲಿ ಬುಧವಾರ ತಡರಾತ್ರಿ ನಡೆದ ಫೈನಲ್‌ ಪಂದ್ಯದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

Advertisement

ನಾಲ್ಕು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿರುವ 22 ವರ್ಷದ ತುಲಿಕಾ ಮಾನ್ ಫೈನಲ್‌ನಲ್ಲಿ ಸ್ಕಾಟ್‌ಲ್ಯಾಂಡ್‌ನ ಸಾರಾ ಅಡ್ಲಿಂಗ್ಟನ್ ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ..

ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ಪಂದ್ಯದಲ್ಲಿ ತುಲಿಕಾ ಅವರು ನ್ಯೂಜಿಲೆಂಡ್‌ನ ಸಿಡ್ನಿ ಆಂಡ್ರ್ಯೂಸ್ ಅವರನ್ನು ಸೋಲಿಸಿದ್ದರು.

ಜೂಡೋದಲ್ಲಿ ಭಾರತಕ್ಕೆ ಇದು ಮೂರನೇ ಪದಕವಾಗಿದೆ. ಸೋಮವಾರ ನಡೆದ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಎಲ್‌.ಶುಶೀಲಾ ದೇವಿ ಮತ್ತು 60 ಕೆಜಿ ಪುರುಷರ ವಿಭಾಗದಲ್ಲಿ ವಿಜಯ್‌ಕುಮಾರ್‌ ಬೆಳ್ಳಿ ಮತ್ತು ಕಂಚಿನ ಪದಕ ಜಯಿಸಿದ್ದರು.

ಇದನ್ನೂ ಓದಿ : ಕರ್ನಾಟಕದ ರಂಗನತಿಟ್ಟು ಪಕ್ಷಿಧಾಮವು “ರಾಮ್ಸರ್‌ ಪಟ್ಟಿ’ಗೆ ಸೇರ್ಪಡೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next