Advertisement
ಈ ಸಂಬಂಧ ಆಸ್ಪತ್ರೆಯ ಮಾಲಿಕರು ನೀಡಿದ ದೂರಿನ ಮೇರೆಗೆ ನಗರದ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಮಾಹಿತಿ ಪಡೆದಿರುವ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯ ಕಂಪ್ಯೂಟರ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ.
Related Articles
Advertisement
ತನಿಖೆಗೆ ತಂಡ ರಚನೆ: ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರು, ತನಿಖೆಗೆ ಇನ್ಸ್‌ಪೆಕ್ಟರ್ ಶೇಖರ್ ನೇತೃತ್ವದಲ್ಲಿ ತಂಡ ರಚಿಸಿದ್ದಾರೆ. ದೇಶದ ಆಸ್ಪತ್ರೆಗಳ ದತ್ತಾಂಶಗಳನ್ನು ಅಳಿಸಿ ಹಾಕಲು ಸೈಬರ್ ಹ್ಯಾಕರ್‌ಗಳು ಪ್ರಯತ್ನ ನಡೆಸುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ “ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ’ ವರ್ಷದ ಹಿಂದೆಯೇ ಎಚ್ಚರಿಕೆ ನೀಡಿತ್ತು. ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲಿಯೇ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳ ಆಸ್ಪತ್ರೆಗಳು ಸೈಬರ್ ದಾಳಿಯ ಭೀತಿಯನ್ನು ಎದುರಿಸಿದ್ದನ್ನು ಸ್ಮರಿಸಬಹುದು.
“ನಗರದ ಆಸ್ಪತ್ರೆಯೊಂದರ ಮೇಲೆ ಸೈಬರ್ ದಾಳಿ ನಡೆದಿರುವುದು ಇದೇ ಮೊದಲಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.” – ಡಾ. ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ.