Advertisement
ನಗರದ ಖಾಸಗಿ ಹೊಟೇಲ್‌ನಲ್ಲಿ ಬುಧವಾರ ಐಟಿ-ಬಿಟಿ ಕಂಪೆನಿಗಳ ಮುಖ್ಯಸ್ಥರ ಜತೆ ಹಮ್ಮಿಕೊಂಡಿದ್ದ ಟೆಕ್ ಫ್ಯೂಶನ್ ಸನ್‌ರೈಸ್ ಸಮ್ಮಿಟ್-2023 ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಭೆಯಲ್ಲಿ ನಗರದ ಸುಮಾರು 40ಕ್ಕೂ ಹೆಚ್ಚು ಐಟಿ ಕಂಪನಿ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದು, ಸೈಬರ್ ಸುರಕ್ಷತೆ ಹಾಗೂ ತಂತ್ರಜ್ಞಾನದ ಬಗ್ಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಸಂಚಾರ ದಟ್ಟಣೆ, ಸೈಬರ್ ಕ್ರೈಂ ಸಮಸ್ಯೆ ಪ್ರಮುಖವಾಗಿದೆ. ಈ ಸಮಸ್ಯೆಗಳ ಪರಿಹಾರ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ, ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್. ಅನುಚೇತ್, ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್, ರಮಣ ಗುಪ್ತಾ, ನೇಮಕಾತಿ ಡಿಜಿಪಿ ಕಮಲ್ ಪಂತ್, ಎಡಿಜಿಪಿ ಪ್ರತಾಪ್ ರೆಡ್ಡಿ ಸೇರಿ ಇತರೆ ಹಿರಿಯ ಐಪಿಎಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Related Articles
ಪೊಲೀಸ್ ಇಲಾಖೆ ನಗರದಲ್ಲಿನ ಐಒಎಸ್ ತಂತ್ರಜ್ಞಾನ ಅಳವಡಿಕೆ, ಕ್ಯೂಆರ್ ಕೋಡ್ ಸ್ಕ್ಯಾನ್ ಮೂಲಕ ದೂರು ಸ್ವೀಕರಿಸುವುದು, ಮೊಬೈಲ್ ಕಳ್ಳತನ ಪ್ರಕರಣವನ್ನು ಸುಲಭವಾಗಿ ದಾಖಲಿಸಲು ಮೊಬೈಲ್ ಆ್ಯಪ್‌ಗ್ಳು ಹಾಗೂ ವೆಬ್‌ಸೈಟ್‌ಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಇವುಗಳ ಬಳಕೆಯಲ್ಲಿ ಯಶಸ್ವಿಯಾಗಿದ್ದೇವೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ನಿರ್ವಹಣೆ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು ಹೇಗೆ ರೂಪಿಸಬೇಕು ಎಂಬ ಬಗ್ಗೆಯೂ ಐಟಿ ಕಂಪೆನಿಗಳಿಂದ ಸಲಹೆ ಪಡೆಯಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
Advertisement