Advertisement
ನಗರದ ಜಿಪಂ ಸಂಭಾಗಣದಲ್ಲಿ ಭಾನುವಾರ ರಾಜ್ಯ ನ್ಯಾಯಾಂಗ ಅಕಾಡೆಮಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ವತಿಯಿಂದ ನ್ಯಾಯಾಂಗ, ಪೊಲೀಸ್ ಅಧಿಕಾರಿಗಳು ಹಾಗೂ ಸರ್ಕಾರಿ ವಕೀಲರಿಗೆ ಹಮ್ಮಿಕೊಂಡಿದ್ದ ವಿದ್ಯುನ್ಮಾನ ಸಾಕ್ಷ್ಯಾಧಾರಗಳ ಬಳಕೆ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ತನಿಖಾಧಿಕಾರಿಗಳಲ್ಲಿ ಬದ್ಧತೆ, ಪ್ರಾಮಾಣಿಕತೆ ಅಗತ್ಯ: ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಎಸ್.ಸುನೀಲ್ ದತ್ ಯಾದವ್ ಮಾತನಾಡಿ, ಸೈಬರ್ ಅಪರಾಧಿ ಎಷ್ಟೇ ಜಾಣ್ಮೆಯಿಂದ ಕೃತ್ಯ ಎಸೆಗಿದರೂ ಕಂಡು ಹಿಡಿಯುವುದು ಕಷ್ಟಕರವಲ್ಲ. ಆದರೆ ತನಿಖಾಧಿಕಾರಿಗಳು ಬದ್ಧತೆ, ಪ್ರಾಮಾಣಿಕತೆಯಿಂದ ಶ್ರಮ ವಹಿಸಬೇಕಾಗುತ್ತದೆ ಎಂದು ಹೇಳಿದರು.
ಮಾಹಿತಿ ತಂತ್ರಜ್ಞಾನದ ನೈಪುಣ್ಯತೆ, ಕೌಶಲ ತನಿಖಾಧಿಕಾರಿಗಳಿಗೆ ಇದ್ದರೆ, ಬಹುಬೇಗ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಬಹುದು. ಯಾವುದೇ ಪ್ರಕರಣ ನ್ಯಾಯಾಲಯದಲ್ಲಿ ನಿಲ್ಲಬೇಕಾದರೆ ಅಥವಾ ಆರೋಪಿಗಳಿಗೆ ಶಿಕ್ಷೆ ಆಗಬೇಕಾದರೆ ಸಾಕ್ಷ್ಯ ಮುಖ್ಯ. ಉತ್ತಮ ನಾಗರಿಕ ಸಮಾಜ ನಿರ್ಮಾಣ ಆಗಬೇಕಾದರೆ ಡಿಜಿಟಲ್ ಸಾಕ್ಷ್ಯಗಳ ಸಂಗ್ರಹಕ್ಕೆ ಒತ್ತು ಕೊಡಬೇಕೆಂದರು.
ದೋಷಾರೋಪ ಪಟ್ಟಿ ಸಲ್ಲಿಸುವುದಷ್ಟೇ ಪೊಲೀಸರ ಕರ್ತವ್ಯ ಸೀಮಿತವಾಗಬಾರದು. ಸೈಬರ್ ಅಪರಾಧ ಪ್ರಕರಣಗಳಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ವರೆಗೂ ಹೋಗಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಸಾಕ್ಷ್ಯಾಧಾರಗಳನ್ನು ಪರಿಣಾಮಕಾರಿಯಾಗಿ ಹಾಜರುಪಡಿಸುವ ಹೊಣೆ ತನಿಖಾಧಿಕಾರಿಗಳದ್ದು ಎಂದರು. -ಕೆ.ಎನ್.ಫಣೀಂದ್ರ, ಹೈಕೋರ್ಟ್ ನ್ಯಾಯಮೂರ್ತಿ ಸಾಕಷ್ಟು ಪ್ರಕರಣಗಳಲ್ಲಿ ತಂತ್ರಜ್ಞಾನ ಬಳಸಿಯೇ ಅಪರಾಧ ನಡೆಸುತ್ತಿರುವುದರಿಂದ ಪತ್ತೆ ಕಾರ್ಯ ಕೂಡ ತನಿಖಾಧಿಖಾರಿಗಳಿಗೆ ಸವಾಲಾಗಿದೆ. ಭವಿಷ್ಯದಲ್ಲಿ ಅಪರಾಧ ಕೃತ್ಯಗಳು ಹೆಚ್ಚು ಸೂಕ್ಷ್ಮತೆ ಹಾಗೂ ಯಾರಿಗೂ ಅರಿವು ಆಗದಂತೆ ನಡೆಯುವುದರಿಂದ ಅವುಗಳ ಪತ್ತೆಗೆ ತನಿಖಾಧಿಕಾರಿಗಳು ತಂತ್ರಜ್ಞಾನ ಬಳಸಿ ಸಾಕ್ಷಿ ಸಂಗ್ರಹಿಸುವುದರಿಂದ ಆರೋಪಿಗಳನ್ನು ಸುಲಭವಾಗಿ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಬಹು.
-ಸೂರಜ್ ಗೋವಿಂದರಾಜ್, ಹೈಕೋರ್ಟ್ ನ್ಯಾಯಮೂರ್ತಿ