Advertisement

ಸೈಕಲ್‌ ಹಂಚಿಕೆ ಸ್ಥಗಿತ, ತನಿಖೆಗೆ ಸೂಚನೆ 

06:00 AM Nov 28, 2018 | |

ಬೆಂಗಳೂರು: ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಸೈಕಲ್‌ ವಿತರಣೆ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

2018-19ನೇ ಸಾಲಿನ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್‌ ಖರೀದಿ ಟೆಂಡರ್‌ ಪ್ರಕ್ರಿಯೆಯಲ್ಲಿಯೂ ಅವ್ಯವಹಾರ ನಡೆದಿದೆ
ಎಂದು ತಿಳಿದು ಬಂದಿದೆ. ಸರ್ಕಾರ ವಿತರಿಸಿರುವ ಸೈಕಲ್‌ಗ‌ಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಸೈಕಲ್‌ ವಿತರಣೆ ಸ್ಥಗಿತಗೊಳಿಸಿ, ಅಕ್ರಮದ ಬಗ್ಗೆ ತನಿಖೆ
ನಡೆಸುವಂತೆ ಸೂಚಿಸಿದ್ದಾರೆ. ರಾಜ್ಯದಲ್ಲಿ ಮರಳಿನ ಅಭಾವ ಸೃಷ್ಟಿಯಾಗಿರುವ ಬಗ್ಗೆಯೂ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹೊಸ ಮರಳು ನೀತಿಯಿಂದ ಸಮಸ್ಯೆ ಉಂಟಾಗಿದ್ದು, ಅದನ್ನು ಸರಿಪಡಿಸಬೇಕು ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಸಮಜಾಯಿಷಿ ನೀಡಿದ್ದಾರೆ ಎಂದು ಗೊತ್ತಾಗಿದೆ. 

ಹಿಂದಿನ ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಮುಖ್ಯಮಂತ್ರಿ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ. ಅನೇಕ ಯೋಜನೆಗಳಲ್ಲಿ ಅವ್ಯವಹಾರವಾಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿವರಣೆ ಕೇಳಿದ್ದಾರೆ ಎನ್ನಲಾಗಿದೆ. ಆದರೆ, ಸಭೆಯಲ್ಲಿ ಉಪಸ್ಥಿತರಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಎಲ್ಲದಕ್ಕೂ ಸಮಜಾಯಿಸಿ ನೀಡುವ ಮೂಲಕ ಹಿಂದಿನ ಸರ್ಕಾರದ ಕಾರ್ಯವೈಖರಿ ಬಗೆಗಿನ ಅಪಸ್ವರಗಳಿಗೆ ತೇಪೆ ಹಚ್ಚುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಕೃಷ್ಣಬೈರೇಗೌಡ ಕ್ಲಾಸ್‌: ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಹಾಗೂ ಬರ ಪರಿಹಾರ ಕಾಮಗಾರಿ ವಿಳಂಬ ಮಾಡುತ್ತಿರುವ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ಗ್ರಾಮೀಣಾಭಿವೃದ್ಧಿ  ಮತ್ತು 
ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಸೈಕಲ್‌ ವಿತರಣೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಕಳಪೆ ಗುಣಮಟ್ಟದ ಸೈಕಲ್‌ ವಿತರಿಸಲಾಗಿದೆ ಎಂದು ತಿಳಿದು
ಬಂದಿರುವುದರಿಂದ ಸೈಕಲ್‌ ವಿತರಣೆ ಸ್ಥಗಿತಗೊಳಿಸಿ, ಈಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ.

● ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ

Advertisement
Advertisement

Udayavani is now on Telegram. Click here to join our channel and stay updated with the latest news.

Next