ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಮುಖಂಡರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೈಕಲ್ ನಲ್ಲಿ ಅಧಿವೇಶನಕ್ಕೆ ಆಗಮಿಸಿದರು.
ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮವಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಇಂದು ನಡೆದ ಸೈಕಲ್ ಜಾಥಾದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಿದರು.
ವಿಧಾನ ಮಂಡಲ ಅಧಿವೇಶನದ ಮೊದಲ ದಿನ ಎತ್ತಿನಗಾಡಿಯಲ್ಲಿ ತೆರಳಿ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಸೈಕಲ್ ಜಾಥಾದ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ:ದೇಗುಲ ತೆರವು ತಡೆಗೆ ಪ್ರತ್ಯೇಕ ವಿಧೇಯಕ ಮಂಡನೆಗೆ ಸರ್ಕಾರದ ನಿರ್ಧಾರ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಪ್ರಿಯಾಂಕ ಖರ್ಗೆ, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ಗೋವಿಂದರಾಜು ಸೇರಿದಂತೆ ಮಾಜಿ ಮಂತ್ರಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಜಾಥಾದಲ್ಲಿ ಭಾಗವಹಿಸಿದ್ದರು.