Advertisement

Kannada cinema; ಉತ್ತರ ಕರ್ನಾಟಕ ಮಂದಿಯ ‘ಸೈಕಲ್ ಸವಾರಿ’

06:48 PM Oct 12, 2023 | Team Udayavani |

ಉತ್ತರ ಕರ್ನಾಟಕದಿಂದ ಸಾಕಷ್ಟು ಹೊಸ ಪ್ರತಿಭೆಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಏನಾದರೂ ಹೊಸದು ಮಾಡಿ, ಪ್ರೇಕ್ಷಕರ ಗಮನ ಸೆಳೆಯಬೇಕೆಂಬುದು ಆಯಾ ತಂಡಗಳ ಪ್ರಯತ್ನ. ಈಗ ಇದೇ ರೀತಿ ಉತ್ತರ ಕರ್ನಾಟಕದ ಮಂದಿ ಸೇರಿಕೊಂಡು “ಸೈಕಲ್‌ ಸವಾರಿ’ ಎಂಬ ಸಿನಿಮಾ ಮಾಡಿದ್ದು, ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.

Advertisement

ಇತ್ತೀಚೆಗೆ ಮಾಧ್ಯಮಗಳ ಮುಂದೆ ಬಂದ ತಂಡ ತಮ್ಮ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ದೇವು ಕೆ ಅಂಬಿಗ ನಿರ್ದೇಶಿಸಿ, ನಾಯಕರಾಗಿಯೂ ನಟಿಸಿದ್ದಾರೆ. ಹಳ್ಳಿಯಲ್ಲಿ ಮಿಠಾಯಿ ಮಾರಿಕೊಂಡು ಜೀವನ ನಡೆಸುತ್ತಿದ್ದ ಯುವಕನೊಬ್ಬನನ್ನು ಶ್ರೀಮಂತ ಮನೆತನದ ಯುವತಿಯು ಪ್ರೀತಿಸಿದಾಗ ಏನಾಗಬಹುದು ಎಂಬುದನ್ನು ಸೈಕಲ್‌ ಸವಾರಿ ಚಿತ್ರದ ಮೂಲಕ ಹೇಳಲಾಗಿದೆಯಂತೆ.

ಚಿತ್ರವನ್ನು ಸುರೇಶ್‌ ಶಿವೂರ ಹಾಗೂ ಲೋಕೇಶ್‌ ಸವದಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಬಿಜಾಪುರದ ದೀಕ್ಷಾ ಭೀಸೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ರೋಹನ್‌ ಎಸ್‌. ದೇಸಾಯಿ ಅವರು ಸಂಗೀತದ ಜೊತೆಗೆ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರ ನ.3ರಂದು ಬಿಡುಗಡೆಯಾಗುತ್ತಿದೆ.

“ಲಾಕ್‌ಡೌನ್‌ ಸಮಯದಲ್ಲಿ 2 ಪಾತ್ರಗಳನ್ನಿಟ್ಟುಕೊಂಡು ಕಿರುಚಿತ್ರವೊಂದನ್ನು ನಿರ್ದೇಶನ ಮಾಡಬೇಕೆಂದು ಈ ಕಥೆ ಬರೆದಿದ್ದೆ. ನಂತರ ಅದು ಸಿನಿಮಾ ಆಯಿತು. ಅಗ ನಮ್ಮಲ್ಲಿದ್ದುದು 5 ಲಕ್ಷ ಮಾತ್ರ. ನಂತರ ಸುರೇಶ್‌ ಶಿವೂರು ಅವರು ನಮ್ಮ ಸಹಾಯಕ್ಕೆ ನಿಂತರು. ಕಡ್ಡಿಹೋಗಿ ದೊಡ್ಡ ಗುಡ್ಡವೇ ಆಯಿತು. ಚಿತ್ರದಲ್ಲಿ 5 ಹಾಡುಗಳಿದ್ದು ಯಾವುದೂ ಕಥೆಯನ್ನು ಬಿಟ್ಟು ಇಲ್ಲ. ನಾನು ಊರಲ್ಲಿ ಬಾಂಬೆ ಮಿಠಾಯಿ ಮಾರುವ ಬಸು ಎಂಬ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಾಹುಕಾರ್‌ ಮನೆಯ ಹುಡುಗಿ ಈತನ ಹಿಂದೆ ಬಿದ್ದು ಲವ್‌ ಮಾಡಿದಾಗ ಏನಾಗುತ್ತದೆ ಎನ್ನುವುದೇ ಈ ಸಿನಿಮಾ’ ಎಂದರು.

ನಾಯಕಿ ದೀಕ್ಷಾ ಭೀಸೆ ಮಾತನಾಡಿ, “ಮೂಲತಃ ನಾನು ಭರತನಾಟ್ಯ ನೃತ್ಯಗಾರ್ತಿ. ಚಿಕ್ಕವಯಸಿನಿಂದಲೂ ಕಲಾವಿದೆ ಯಾಗಬೇಕೆಂಬ ಆಸೆಯಿತ್ತು. ಅದು ಈ ಚಿತ್ರದಿಂದ ಈಡೇರಿದೆ. ಯಾವುದೇ ತರಬೇತಿ ಇಲ್ಲದೆ ಅಭಿನಯಿಸಿದ್ದೇನೆ’ ಎಂದರು. ವಿಲನ್‌ ಪಾತ್ರ ಮಾಡಿರುವ ಶಿವಾಜಿ, ನಾಯಕನ ತಾಯಿ ಪಾತ್ರಧಾರಿ ಗೀತಾ ರಾಘವೇಂದ್ರ, ಮತ್ತೂಬ್ಬ ಕಾವ್ಯ ಚಿತ್ರದ ಕುರಿತು ಮಾತನಾಡಿದರು

Advertisement
Advertisement

Udayavani is now on Telegram. Click here to join our channel and stay updated with the latest news.

Next