Advertisement

ಕಡೆಗೂ ಮಕ್ಕಳಿಗೆ ಸೈಕಲ್‌ ಭಾಗ್ಯ

12:45 PM Nov 20, 2018 | |

ಹುಣಸೂರು: ತಾಲೂಕಿನ ಚಿಲ್ಕುಂದ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಜಿಪಂ ಸದಸ್ಯೆ ಜಯಲಕ್ಷ್ಮೀ ಹಾಗೂ ತಾಪಂ ಉಪಾಧ್ಯಕ್ಷ ಪ್ರೇಮ್‌ಕುಮಾರ್‌ ಸೈಕಲ್‌ ವಿತರಿಸಿದರು. ಶಾಲಾ ಮಕ್ಕಳಿಗೆ ಸೈಕಲ್‌ ವಿತರಿಸದ ಬಗ್ಗೆ ಉದಯವಾಣಿಯಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೊನೆಗೂ ಸೈಕಲ್‌ ವಿತರಿಸಿದ್ದಾರೆ.

Advertisement

ಸೈಕಲ್‌ ವಿತರಿಸಿ ಮಾತನಾಡಿದ ಜಿಪಂ ಸದಸ್ಯೆ ಜಯಲಕ್ಷ್ಮೀ, ಹಳ್ಳಿಗಾಡಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಸೈಕಲ್‌ ಸೇರಿದಂತೆ ಬಿಸಿಯೂಟ, ವಿದ್ಯಾರ್ಥಿ ವೇತನ, ಸಮವಸ್ತ್ರ, ಪಠ್ಯಪುಸ್ತಕ, ಪೌಷ್ಟಿಕಯುಕ್ತ ಹಾಲನ್ನು ವಿತರಿಸಲಾಗುತ್ತಿದೆ. ಈ ಸೌಲಭ್ಯ ಪಡೆದು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಪಂ ಉಪಾಧ್ಯಕ್ಷ ಪ್ರೇಮ್‌ಕುಮಾರ್‌  ಮಾತನಾಡಿ, ಸರಕಾರದ ಸೌಲಭ್ಯಗಳನ್ನು ಪಡೆದು ಉತ್ತಮ ಸಾಧನೆ ತೋರಬೇಕು. ಪ‌ರಿಸರ ಸಂರಕ್ಷಣೆ ಕಡೆಗೂ ಗಮನಹರಿಸಿ, ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಸುಮಿತ್ರಾ, ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್‌, ಮುಖ್ಯ ಶಿಕ್ಷಕಿ ಮಾಲತಿ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next