ಮಂಗಳೂರು/ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವ ಸಾಧ್ಯತೆಯಿರುತ್ತದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.
ಇದನ್ನೂ ಓದಿ:Hybrid Model ಒಪ್ಪದ ಎಸಿಸಿ: ಏಷ್ಯಾ ಕಪ್ ಆಡದಿರಲು ಪಾಕಿಸ್ತಾನ ಚಿಂತನೆ
ಈ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು/ ಪ್ರವಾಸಿಗರು ಸಮುದ್ರ/ ನದಿ ತೀರ ಪ್ರದೇಶಗಳಲ್ಲಿ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.
ಈ ಸಂದರ್ಭದಲ್ಲಿ ಮಕ್ಕಳು/ ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ/ ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲಬಾರದು. ಅಲ್ಲದೆ ನೆರೆ ಪೀಡಿತ ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ಸೇರಬೇಕು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.