Advertisement

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

12:58 AM Nov 27, 2024 | Team Udayavani |

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ “ಫೆಂಗಲ್” ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ವಿವಿಧ ಸ್ಥಳಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಪ್ರಕಾರ ತಮಿಳುನಾಡಿನಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ.

Advertisement

ಚೆಂಗಲ್‌ಪೇಟ್‌, ಕಾಂಚೀಪುರಂ, ತಿರುವಳ್ಳೂರ್‌, ಕಡಲೂರು, ನಾಗಪಟ್ಟಿಣಂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ತಮಿಳುನಾಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚೆನ್ನೈ ಭಾರೀ ಪ್ರಮಾಣದಲ್ಲಿ ಮಳೆಯಾಗಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ಸ್ಥಳಕ್ಕೆ ಪ್ರವಾಹ ನೀರು ನುಗ್ಗಿದೆ. ಹೀಗಾಗಿ, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ತುರ್ತು ಸಭೆ ನಡೆಸಿ ರಾಜ್ಯ ವಿಪತ್ತು ನಿರ್ವಹಣಾ ಘಟಕ, ಎನ್‌ಡಿಆರ್‌ಎಫ್ ಸಿಬ್ಬಂದಿಯನ್ನು ಮಳೆಯಿಂದ ತೊಂದರೆಗೆ ಒಳಗಾಗಿರುವ ಜಿಲ್ಲೆಗಳಿಗೆ ಕಳುಹಿಸಲು ಸೂಚಿಸಿದ್ದಾರೆ.

ಹವಾಮಾನ ಇಲಾಖೆ ಮೂಲಗಳ ಪ್ರಕಾರ ನ. 27 ರಂದು ಚಂಡಮಾರುತದ ಚಂಡಮಾರುತವಾಗಿ ತೀವ್ರಗೊಳ್ಳಲಿದ್ದು, ನಂತರ ಇದು ಉತ್ತರ ವಾಯುವ್ಯದ ಕಡೆಗೆ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುತ್ತದೆ. ನಂತರದ 2 ದಿನಗಳಲ್ಲಿ ಶ್ರೀಲಂಕಾ ಕರಾವಳಿಯಲ್ಲೂ ಮಳೆಯಾಗಲಿದೆ. ನವೆಂಬರ್ 26 ಮತ್ತು 27 ರಂದು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.

ಆಂಧ್ರಪ್ರದೇಶಕ್ಕೂ ಮಳೆಯ ಎಚ್ಚರಿಕೆ ನೀಡಲಾಗಿದ್ದು, ನ 26 ರಿಂದ 29 ನಡುವೆ ಮಳೆಯಾಗಲಿದೆ. ನಾಗಪಟ್ಟಣಂ, ತಿರುವರೂರ್ ಮತ್ತು ಮೈಲಾಡುತುರೈ ಜಿಲ್ಲೆಗಳಿಗೆ ಮತ್ತು ಕಾರೈಕಲ್ ಪ್ರದೇಶಕ್ಕೆ ನ.26 ರಂದು ಐಎಂಡಿ ರೆಡ್ ಅಲರ್ಟ್ ಘೋಷಿಸಿದ್ದು, ಈ ನಾಲ್ಕು ಜಿಲ್ಲೆಗಳಲ್ಲಿ ಹಲವೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

Advertisement

ನ.27ಕ್ಕೆ ಮೈಲಾಡುತುರೈ, ಕಡಲೂರು ಮತ್ತು ಕಾರೈಕಲ್ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು, ಪುದುಕೊಟ್ಟೈ, ಅರಿಯಲೂರು, ತಂಜಾವೂರು, ಕಡಲೂರು ಮತ್ತು ಶಿವಗಂಗೈ ಮತ್ತು ರಾಮನಾಥಪುರದಲ್ಲಿ ನ.26 ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next