Advertisement

Cyclone Fengal Effect: ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈಸ್ಕೂಲ್ ವರೆಗೆ ರಜೆ ಘೋಷಣೆ

06:59 PM Dec 02, 2024 | Team Udayavani |

ಚಿಕ್ಕಮಗಳೂರು: ಫೈಂಜಾಲ್ ಚಂಡಮಾರುತದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮೋಡಕವಿದ ವಾತವರಣ ನಿರ್ಮಾಣವಾಗಿದ್ದು ಸೋಮವಾರ ಮಧ್ಯಾಹ್ನದ ವೇಳೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕು ಸುತ್ತಮುತ್ತ ತುಂತುರು ಮಳೆಯಾಗಿದೆ. ಡಿ.3 ರಂದು ಮಳೆಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಹಾಗೂ ಡಿ.4 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಎರಡು ದಿನಗಳ ಕಾಲ ಸಾರ್ವಜನಿಕರು ಮುಂಜಾಗೃತ ಕ್ರಮವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

Advertisement

ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗುಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕು. ಸಾರ್ವಜನಿಕರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆ ಕಟ್ಟೆಗಳಿಗೆ ತೆರಳಬಾರದು ಹಾಗೂ ಮಳೆಯಿಂದಾಗಿ ಧರೆ, ಗುಡ್ಡ ಕುಸಿತ ಉಂಟಾಗುವುದರಿಂದ ಸಾರ್ವಜನಿಕರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಾಲೆ ಅಂಗನವಾಡಿಗೆ ರಜೆ

ಹವಮಾನ ವೈಪರಿತ್ಯದಿಂದ ಜಿಲ್ಲಾದ್ಯಂತ ಎರಡು ದಿನಗಳ ಬಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾದ್ಯಂತ ಡಿ.3ರಂದು ಶಾಲೆ, ಅಂಗನವಾಡಿ ಹಾಗೂ  ಹೈಸ್ಕೂಲ್ ವರೆಗೆ ಅನ್ವಯವಾಗುವಂತೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next