Advertisement

Cyclone Fengal Effect: ದ.ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಣೆ

06:12 PM Dec 02, 2024 | Team Udayavani |

ಮಂಗಳೂರು: ಫೈಂಜಲ್‌ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವೂ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿ.3 ರಂದು (ಮಂಗಳವಾರ) ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

Advertisement

ಕೊಡಗು, ಕಾಸರಗೋಡು ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ನಾಳೆ ರಜೆ:
ಫೈಂಜಲ್‌ ಚಂಡಮಾರುತದ ಕಾರಣ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜು (ಪದವಿ, ಸ್ನಾತಕೋತ್ತರ ಹೊರತು) ಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಿಸಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಎಲ್ಲ ವೃತ್ತಿ ಪರ ಕಾಲೇಜುಗಳ ಸಹಿತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ಇಂಪಶೇಖರ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಮದರಸಗಳಿಗೂ ರಜೆ ಅನ್ವಯವಾಗುತ್ತದೆ. ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯ ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next