Advertisement

ಗಜ ಎಫೆಕ್ಟ್: ಸಿಡಿಲಿಗೆ ಮಹಿಳೆ ಬಲಿ

06:15 AM Nov 19, 2018 | Team Udayavani |

ಬೆಂಗಳೂರು: ನೆರೆಯ ತಮಿಳುನಾಡಿನಲ್ಲಿ ಉಂಟಾದ “ಗಜ’ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ತಟ್ಟಿದ್ದು, ಕೆಲವೆಡೆ ಮಳೆಯಾಗಿದೆ.

Advertisement

ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು, ಲಕ್ಷಮವ್ವ ಹೆಮ್ಲಪ್ಪ ಲಮಾಣಿ (60) ಎಂಬುವರು ಮೃತಪಟ್ಟಿದ್ದಾರೆ. 

ಗೌರಮ್ಮಾ ತಿಪ್ಪಣ್ಣ ಲಮಾಣಿ ಎಂಬುವರು ಗಾಯಗೊಂಡಿದ್ದಾರೆ. ಇದೇ ವೇಳೆ, ರಾಜಧಾನಿ ಬೆಂಗಳೂರಿನ ಕೆಲವೆಡೆ, ಸಿದ್ದಾಪುರ,ಬಿಳಗಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಬೆಳ್ತಂಗಡಿ, ಕಾರ್ಕಳ, ಕುಂದಾಪುರ ಸೇರಿದಂತೆ ದ.ಕ.,ಉಡುಪಿ ಜಿಲ್ಲೆಗಳ ಹಲವೆಡೆ ಮಳೆಯಾಗಿದೆ.

ಮೋಡ ಮುಸುಕಿದ ವಾತಾವರಣದ ನಡುವೆ ಆಗಾಗ ತುಂತುರು ಮಳೆ ಮತ್ತು ಜೋರಾಗಿ ಗಾಳಿ ಬೀಸುತ್ತಿರುವುದರಿಂದ ಮುಂಡಗೋಡ, ಸಿರುಗುಪ್ಪ ಸೇರಿದಂತೆ ಉತ್ತರ ಕನ್ನಡ, ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದ ಸಾವಿರಾರು ಎಕರೆ ಭತ್ತದ ಬೆಳೆ ನೆಲಕ್ಕುರುಳಿದೆ. ಹತ್ತಿ, ಭತ್ತ, ಮೆಣಸಿನಕಾಯಿ, ಮೆಕ್ಕೆಜೋಳ, ಜೋಳ ಮುಂತಾದ ಬೆಳೆಗಳಿಗೆ ಕೀಟಗಳ ಕಾಟ ಹೆಚ್ಚಾಗಿದೆ. ಈ ಮಧ್ಯೆ, ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next