Advertisement
ಅರಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ತೀವ್ರತೆ ಪಡೆದು “ನಿಸರ್ಗ’ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಮಂಗಳ ವಾರ ರಾತ್ರಿ ಮತ್ತಷ್ಟು ಪ್ರಬಲವಾಗಿದೆ. ಇದು ಬುಧವಾರ ಮಧ್ಯಾಹ್ನದ ವೇಳೆಗೆ ಉತ್ತರ ಮಹಾರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ಕರಾವಳಿಗೆ ಅಪ್ಪಳಿಸಲಿದೆ. ದಕ್ಷಿಣ ಮುಂಬಯಿಯಿಂದ 94 ಕಿ.ಮೀ. ದೂರದಲ್ಲಿರುವ ರಾಯಗಢ ಜಿಲ್ಲೆಯ ಆಲಿಬಾಗ್‌ಗೆ ಸನಿಹದಲ್ಲಿ ಅದು ಭೂತಾಡನವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ.
ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಗುಜರಾತ್ ಕರಾವಳಿ ತೀರ ಸಮೀಪದ ವಲ್ಸಾಡ್ ಮತ್ತು ನವಸಾರಿ ಜಿಲ್ಲೆಗಳ 47 ಗ್ರಾಮಗಳ 20 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
Related Articles
ಕೇರಳಕ್ಕೆ ಸೋಮವಾರ ನೈಋತ್ಯ ಮುಂಗಾರು ಪ್ರವೇಶಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಕರ್ನಾಟಕದ ಒಳನಾಡು ಮತ್ತು ಕರಾವಳಿಯಲ್ಲೂ ಭಾರೀ ಗಾಳಿ, ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ.
Advertisement
ಎಲ್ಲೆಲ್ಲಿ ಭಾರೀ ಮಳೆ?ಚಂಡಮಾರುತದ ಪ್ರಭಾವದಿಂದ ಉತ್ತರ ಮಹಾರಾಷ್ಟ್ರ, ದಕ್ಷಿಣ ಗುಜರಾತ್, ಕರ್ನಾಟಕ, ಕೇರಳ, ಕೊಂಕಣ, ಗೋವಾ, ಮಧ್ಯಪ್ರದೇಶಗಳ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ಚಂಡಮಾರುತದ ಪ್ರಭಾವದಿಂದ ಭಾರತದ ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಉಂಟಾಗಬಹುದಾದ ಪರಿಸ್ಥಿತಿಯನ್ನು ಅವಲೋಕಿಸು ತ್ತಿದ್ದೇವೆ. ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿ ಸುವೆ. ಎಲ್ಲರೂ ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಾ ಕ್ರಮಗಳನ್ನು ಪಾಲಿಸಬೇಕು.
-ನರೇಂದ್ರ ಮೋದಿ, ಪ್ರಧಾನಿ