Advertisement

ಗುಲಾಬ್ ಅಬ್ಬರ: ಮಹಾ ಮಳೆಗೆ 25ಕ್ಕೂ ಹೆಚ್ಚು ಮಂದಿ ಬಲಿ

02:57 PM Sep 29, 2021 | Team Udayavani |

ಮುಂಬಯಿ : ದೇಶದ ವಿವಿಧೆಡೆ ಗುಲಾಬ್ ಚಂಡ ಮಾರುತದ ದುಷ್ಪರಿಣಾಮವಾಗಿ ಭಾರಿ ಮಳೆ ಸುರಿಯುತ್ತಿದ್ದು, 25 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸುತ್ತಿದೆ. ಮಹಾರಾಷ್ಟ್ರದ ಹಲವೆಡೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

Advertisement

ಮಹಾರಾಷ್ಟ್ರದಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. 17 ಕ್ಕೂ ಹೆಚ್ಚು ಮಂದಿ ಅವಘಡಗಳಲ್ಲಿ ಪ್ರಾಣ ಕಳೆದುಕೊಂಡಿರುವ ಬಗ್ಗೆ ವರದಿಯಾಗಿದೆ.

ಮರಾಠವಾಡ ಮತ್ತು ವಿದರ್ಭದ ಕೆಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಮತ್ತು ನಾಲೆಗಳು ಉಕ್ಕಿ ಹರಿಯುತ್ತಿದ್ದು, ಅನೇಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಕೆಲವೆಡೆ ಅನೇಕ ಮಂದಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದು, ರಕ್ಷಣ ಕಾರ್ಯಾಚರಣೆ ನಡೆಯುತ್ತಿದೆ. ಬೆಳೆಗಳಿಗೆ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.

ಯಾವತ್ಮಾಳ್ ಜಿಲ್ಲೆಯಲ್ಲಿ ಸಾರಿಗೆ ಬಸ್ಸೊಂದು ಕೊಚ್ಚಿ ಹೋಗಿದ್ದು ಮೂವರು ನಾಪತ್ತೆಯಾಗಿದ್ದಾರೆ. ಮಧ್ಯ ಮಹಾರಾಷ್ಟ್ರದಲ್ಲಿ ರಕ್ಷಣಾ ಪಡೆಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಆಂಧ್ರ ದಲ್ಲೂ ಭಾರಿ ಮಳೆ ಸುರಿಯುತ್ತಿದ್ದು ಶ್ರೀಕಾಕುಳಂ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ತೆಲಗಾಂಣದಲ್ಲೂ ಕುಂಭದ್ರೋಣ ಮಳೆ ಸುರಿಯುತ್ತಿದೆ.

Advertisement

ಪಶ್ಚಿಮ ಬಂಗಾಳದಲ್ಲೂ ವರುಣ ರೌದ್ರ ಅವತಾರ ತೋರುತ್ತಿದ್ದು, ಕೋಲ್ಕತಾದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಕೊಲ್ಕತಾ ನಗರದ ಆಹಿರಿಟೋಲಾ ರಸ್ತೆಯಲ್ಲಿ ಗೋಡೆ ಕುಸಿದು 3 ವರ್ಷ ಪ್ರಾಯದ ಮಗು ದಾರುಣವಾಗಿ ಸಾವನ್ನಪ್ಪಿದೆ.

ದೇಶದ ವಿವಿಧೆಡೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರತೆ ಪಡೆಯುತ್ತಿದ್ದು, ಶುಕ್ರವಾರದಿಂದ ಗುಜರಾತ್ ನಲ್ಲೂ ಭಾರಿ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next