ಆಂಧ್ರಪ್ರದೇಶ: ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಸೃಷ್ಟಿಯಾಗುತ್ತಿರುವ ‘ಮೈಚಾಂಗ್’ ಚಂಡಮಾರುತ ಬಲಗೊಳ್ಳುತ್ತಿರುವುದರಿಂದ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಹೊಸ ಚಂಡಮಾರುತ ನೆಲ್ಲೂರು ಮತ್ತು ಮಚಲೀಪಟ್ಟಣಂಗಳ ನಡುವೆ ಮಂಗಳವಾರ ಹಾದು ಹೋಗಲಿದೆ. ಇದರ ಜತೆಗೆ ಪ್ರತೀ ಗಂಟೆಗೆ 80ರಿಂದ 90 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಒಂದು ಹಂತದಲ್ಲಿ ಅದರ ವೇಗ 100 ಕಿ.ಮೀ.ಗೆ ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ಅದರ ನಂತರ, ಇದು ಡಿಸೆಂಬರ್ 4 ರ ವೇಳೆಗೆ ದಕ್ಷಿಣ ಆಂಧ್ರಪ್ರದೇಶ ಮತ್ತು ಪಕ್ಕದ ಉತ್ತರ ತಮಿಳುನಾಡು ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯನ್ನು ತಲುಪುತ್ತದೆ.
ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಪುದುಚೇರಿ, ಕಾರೈಕಲ್ ಮತ್ತು ಯಾನಂ ಪ್ರದೇಶಗಳಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ರೈಲ್ವೆಯು ಡಿಸೆಂಬರ್ 3 ರಿಂದ 6 ರ ವರೆಗೆ ರಾಜ್ಯದ ರೈಲುಗಳು ಸೇರಿದಂತೆ ತಮಿಳುನಾಡಿನ 118 ರೈಲುಗಳನ್ನು ರದ್ದುಗೊಳಿಸಿದೆ.
ಇದನ್ನೂ ಓದಿ: Assembly Election Results 2023: ಯಾವ ರಾಜ್ಯದಲ್ಲಿ ಯಾವ ಪಕ್ಷ ಮುನ್ನಡೆಯಲ್ಲಿದೆ?