Advertisement

“ಮೋಚಾ’ ಚಂಡಮಾರುತ: ಅಂಡಮಾನ್‌ನಲ್ಲಿ ಭಾರಿ ಮಳೆ ಸಾಧ್ಯತೆ

09:07 PM May 10, 2023 | Team Udayavani |

ಪೋರ್ಟ್‌ ಬ್ಲೇರ್‌: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ “ಮೊಚಾ’ ಚಂಡಮಾರುತ ಅಂಡಮಾನ್‌ ಮತ್ತು ನಿಕೋಬಾರ್‌ನ ಪೋರ್ಟ್‌ ಬ್ಲೇರ್‌ ದ್ವೀಪದ ಸಮೀಪ ತೀವ್ರತೆ ಪಡೆದಿದ್ದು, ಬುಧವಾರ ಸಂಜೆಯ ನಂತರ ಪೂರ್ಣ ಪ್ರಮಾಣದ ಚಂಡಮಾರುತವಾಗಿ ಬದಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Advertisement

ಮೇ 11ರ ನಂತರ ಚಂಡಮಾರುತ ತೀವ್ರಗೊಳ್ಳಲಿದ್ದು, 12ರಂದು ಆಗ್ನೇಯ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಸಮೀಪದ ಪ್ರದೇಶಗಳಲ್ಲಿ ಅತ್ಯಂತ ತೀವ್ರವಾದ ಚಂಡಮಾರುತವಾಗಿ ಬದಲಾಗುತ್ತದೆ. ನಂತರ ಬಾಂಗ್ಲಾದೇಶದ ಕಾಕ್ಸ್‌ ಬಜಾರ್‌ ಮತ್ತು ಮ್ಯಾನ್ಮಾರ್‌ನ ರಾಖೀನ್‌ ಕರಾವಳಿ ಕಡೆಗೆ ಚಲಿಸಲಿದೆ ಎಂದು ಹೇಳಿದೆ.

ಮೇ 13ರವರೆಗೆ ಸಮುದ್ರಕ್ಕೆ ಇಳಿಯದಂತೆ ಅಂಡಮಾನ್‌ ಮತ್ತು ನಿಕೋಬಾರ್‌ನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಆ ಪ್ರದೇಶದಲ್ಲಿ ಮೇ 12ರಂದು ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next