Advertisement
ತಾಸಿಗೆ 110ರಿಂದ 120 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಚಂಡಮಾರುತದ ವೇಗ 135 ಕಿ.ಮೀ.ಗೆ ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಚಂಡಮಾರುತ ಉತ್ತರ ದಿಕ್ಕಿಗೆ ಚಲಿಸುತ್ತಿದ್ದು, ರವಿವಾರ ಮಧ್ಯರಾತ್ರಿಯಿಂದ ಸೋಮವಾರ ಸಂಜೆಯವರೆಗೆ ಕೋಲ್ಕತಾ, ಹೌರಾ, ಹೂಗ್ಲಿಯಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದೆ.
ಭಾರೀ ಮಳೆ ಸುರಿಯತ್ತಿರುವುದರಿಂದ ಕಾರಣ ಸಮುದ್ರ ತೀರದಲ್ಲಿರುವ ಜನರು ಹಾಗೂ ಮೀನುಗಾರರಿಗೆ ಸರಕಾರ ಎಚ್ಚರಿಕೆ ನೀಡಿದೆ. ತೀರ ಪ್ರದೇಶದಲ್ಲಿರುವ ಸುಮಾರು 1 ಲಕ್ಷ ಜನರನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ. ರಕ್ಷಣ ಕಾರ್ಯ ನಿರ್ವಹಿಸಲು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ನ 16 ತಂಡಗಳನ್ನು ನಿಯೋಜಿಸಲಾಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ
ಹೊಸದಿಲ್ಲಿ: ರೀಮಲ್ ಚಂಡಮಾರುತದಿಂದ ಆಗುತ್ತಿರುವ ಹಾನಿ ಹಾಗೂ ಅದರ ಪರಿಹಾರ ಕಾರ್ಯಗಳ ಕುರಿತು ಪ್ರಧಾನಿ ಮೋದಿಯವರು ಹವಾಮಾನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಂಭಾವ್ಯ ಹಾನಿಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಪ್ರಧಾನಿ ಸೂಚಿಸಿದ್ದಾರೆ.