ನವದೆಹಲಿ: ಯಾಸ್ ಚಂಡಮಾರುತದ ಹಾನಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಮೇ 28) ಒಡಿಶಾ, ಪಶ್ಚಿಮಬಂಗಾಳ ಮತ್ತು ಜಾರ್ಖಂಡ್ ಗೆ ಒಟ್ಟು ಒಂದು ಸಾವಿರ ಕೋಟಿ ರೂಪಾಯಿ ಪರಿಹಾರ ಘೋಷಿಸಿದೆ.
ಇದನ್ನೂ ಓದಿ:ನಳೀನ ಕುಮಾರ್ ಕಟೀಲ್ ಜೊತೆ ಸಿಟಿ ರವಿ ರಹಸ್ಯ ಮಾತುಕತೆ
ಒಡಿಶಾಕ್ಕೆ 500 ಕೋಟಿ ರೂಪಾಯಿ, ಉಳಿದ 500 ಕೋಟಿ ರೂಪಾಯಿಯಲ್ಲಿ ಪಶ್ಚಿಮಬಂಗಾಳ ಮತ್ತು ಜಾರ್ಖಂಡ್ ರಾಜ್ಯಕ್ಕೆ ಹಂಚಲಾಗಿದೆ ಎಂದು ವರದಿ ತಿಳಿಸಿದೆ. ಕೇಂದ್ರ ಸರ್ಕಾರದ ತಂಡ ಹಾನಿ ಪರಿಶೀಲಿಸಿದ ನಂತರ ನೀಡುವ ನಷ್ಟದ ವರದಿ ಆಧಾರದ ಮೇಲೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಯಾಸ್ ಚಂಡಮಾರುತದಿಂದ ಮೃತಪಟ್ಟ ಕುಟುಂಬದ ವ್ಯಕ್ತಿಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಈಗಾಗಲೇ ಸರ್ಕಾರ ಘೋಷಿಸಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮಬಂಗಾಳ ಹಾಗೂ ಒಡಿಶಾಕ್ಕೆ ಯಾಸ್ ಚಂಡಮಾರುತದಿಂದ ಸಂಭವಿಸಿದ ನಷ್ಟದ ಪರಿಶೀಲನೆ ನಡೆಸಲು ಭೇಟಿ ನೀಡಿದ್ದು, ಪಟ್ನಾಯಕ್ ಹಾಗೂ ಮಮತಾ ಬ್ಯಾನರ್ಜಿ ಜತೆ ಮಾತುಕತೆ ನಡೆಸಿದ ನಂತರ ವೈಮಾನಿಕ ಸಮೀಕ್ಷೆ ನಡೆಸಿದ್ದರು.