Advertisement

ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರ

10:52 PM Nov 30, 2021 | Team Udayavani |

ನವದೆಹಲಿ: ಈ ವಾರದಲ್ಲಿ ಕೊಂಚ ತಗ್ಗಿರುವ ಮಳೆಯು ಇದೇ ಶನಿವಾರದಿಂದ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement

ದಕ್ಷಿಣ ಥಾಯ್ಲೆಂಡ್‌ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮವಾಗಿ ಡಿ.4ರ ಬೆಳಗ್ಗೆ ಉತ್ತರ ಆಂಧ್ರ-ಒಡಿಶಾ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸಲಿದೆ.

ಅದರಿಂದಾಗಿ ಈ ಎರಡೂ ರಾಜ್ಯಗಳ ಕರಾವಳಿ ಭಾಗ ಹಾಗೂ ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲೂ ಮಳೆ ಸುರಿಯುವ ಸಾಧ್ಯತೆಯಿದೆ.

ಇನ್ನೊಂದೆಡೆ ತಮಿಳುನಾಡಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮುಲ್ಲಪೆರಿಯಾರ್‌ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಏರಿದ್ದು, 9 ಗೇಟುಗಳ ಮೂಲಕ, 2,300 ಕ್ಯುಸೆಕ್‌ ನೀರನ್ನು ಹೊರ ಬಿಡುತ್ತಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

Advertisement
Advertisement

Udayavani is now on Telegram. Click here to join our channel and stay updated with the latest news.

Next