Advertisement

ಸಿಲಿಂಡರ್‌ ಸ್ಫೋಟ: ಯುವಕನಿಗೆ ಗಾಯ

06:22 AM Feb 22, 2019 | Team Udayavani |

ಬೆಂಗಳೂರು: ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಕೇರಳ ಮೂಲದ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಬೇಗೂರು ಠಾಣೆ ವ್ಯಾಪ್ತಿಯ ಲಕ್ಷ್ಮೀ ಲೇಔಟ್‌ನಲ್ಲಿ ಬುಧವಾರ ಸಂಜೆ ನಡೆದಿದೆ. ನಿಶಾಂತ್‌ (28) ಗಾಯಗೊಂಡ ಯುವಕ. ಘಟನೆಯಲ್ಲಿ ಶೇ.80ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿರುವ ನಿಶಾಂತ್‌, ವಿಕ್ಟೋರಿಯಾ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಕೆಲ ವರ್ಷಗಳಿಂದ ಬೇಗೂರಿನ ಲಕ್ಷ್ಮೀ ಲೇಔಟ್‌ನ ಬಾಡಿಗೆ ಮನೆಯಲ್ಲಿ ವಾಸವಿರುವ ನಿಶಾಂತ್‌, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಗ್ಯಾಸ್‌ ಸ್ಟವ್‌ ಹಚ್ಚುವಾಗ ಅನಿಲ ಸೋರಿಕೆಯಿಂದ ಸ್ಫೋಟಗೊಂಡಿದೆ ಎಂದು ಹೇಳಲಾಗಿದೆ. 

ಆದರೆ, ಪ್ರಾಥಮಿಕ ಮಾಹಿತಿ ಪ್ರಕಾರ ನಿಶಾಂತ್‌ ಮಾನಸಿಕ ಖನ್ನತೆಗೆ ಒಳಗಾಗಿದ್ದು, ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ನಿಶಾಂತ್‌ ಪೋಷಕರಿಗೆ ಮಾಹಿತಿ ನೀಡಿದ್ದು, ಅವರು ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next