Advertisement

Kumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

06:27 PM Jun 22, 2024 | Team Udayavani |

ಕುಮಟಾ: ಶಾಸಕ ದಿನಕರ ಶೆಟ್ಟಿ, ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಸಹೋದರ ಹಾಗೂ ಅವರ ಪತ್ನಿಗೆ ಗಾಯವಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮನೆಯ ವಸ್ತುಗಳು ಬೆಂಕಿಗಾಹುತಿಯಾಗಿದೆ.

Advertisement

ಪಟ್ಟಣದ ಕೊಪ್ಪಳಕರವಾಡಿ ವಾರ್ಡ್ ನಲ್ಲಿದ್ದ ಶಾಸಕ ದಿನಕರ ಶೆಟ್ಟಿ ಸಹೋದರ ಮಧುಕರ ಶೆಟ್ಟಿ ಅವರ ಮನೆ ಇದಾಗಿದ್ದು ಶನಿವಾರ ಕುಟುಂಬ ಸಮೇತರಾಗಿ ಹೊರಹೋಗಿದ್ದರು ಎನ್ನಲಾಗಿದೆ. ಅವರು ಮನೆಗೆ ಬಂದು ಬಾಗಿಲು ತೆರೆದಾಗ ಸಿಲಿಂಡ‌ರ್ ಸ್ಫೋಟಗೊಂಡಿದೆ.

ಈ ವೇಳೆ ಮಧುಕರ ಶೆಟ್ಟಿ ಅವರ ಪತ್ನಿಗೂ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಮನೆಯ ಒಳಭಾಗ ಹೊತ್ತಿ ಉರಿದಿದ್ದು, ಟಿವಿ,ಪೀಠೋಪಕರಣ, ಬಟ್ಟೆ ಸೇರಿದಂತೆ ಮನೆಯಲ್ಲಿದ್ದ ಲಕ್ಷಾಂತರ ರೂ.ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿದೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆಗೆ ಕುಟುಂಬದವರು ಮನೆಯಿಂದ ಹೋಗುವಾಗ ಸಿಲಿಂಡರ್ ಆಫ್ ಮಾಡದೇ ಹೋಗಿರುವುದು ಕಾರಣ ಎನ್ನಲಾಗುತ್ತಿದ್ದು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Advertisement

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next