Advertisement
ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರು ಅತಿವೇಗದಿಂದ ಚಲಿಸುತ್ತಿತ್ತು ಮತ್ತು ರಾಂಗ್ ಸೈಡ್ ನಿಂದ (ಎಡದಿಂದ) ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
Related Articles
Advertisement
ರಸ್ತೆ ಬದಿಯ ಗ್ಯಾರೇಜ್‌ನಲ್ಲಿ ಕೆಲಸ ಮಾಡುವ ಪ್ರತ್ಯಕ್ಷದರ್ಶಿ ಮರಾಠಿ ಟಿವಿ ಚಾನೆಲ್‌ಗೆ ಹೇಳಿಕೆ ನೀಡಿದ್ದು “ನಾವು ಅಪಘಾತದ ಸ್ಥಳಕ್ಕೆ ಧಾವಿಸಿದೆವು ಆದರೆ ವಾಹನ ಅಥವಾ ಗಾಯಗೊಂಡ ವ್ಯಕ್ತಿಗಳನ್ನು ಮುಟ್ಟಲಿಲ್ಲ ಎಂದಿದ್ದಾರೆ.
“10 ನಿಮಿಷಗಳ ಬಳಿಕ ಇಬ್ಬರು ಗಾಯಗೊಂಡ ವ್ಯಕ್ತಿಗಳನ್ನು ಕಾರಿನಿಂದ ಹೊರತೆಗೆಯಲಾಯಿತು ಮತ್ತು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇಬ್ಬರು ಮೃತಪಟ್ಟಿದ್ದರು ಎಂದು ಅವರು ಹೇಳಿದರು.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, ಮಿಸ್ತ್ರಿ ಅವರು ಮರ್ಸಿಡಿಸ್ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬಯಿಯತ್ತ ಪ್ರಯಾಣಿಸುತ್ತಿದ್ದರು. ಸೂರ್ಯ ನದಿಯ ಸೇತುವೆಯ ಮೇಲೆ ಭಾನುವಾರ ಮಧ್ಯಾಹ್ನ 3.15 ರ ಸುಮಾರಿಗೆ ಅಪಘಾತ ಸಂಭವಿಸಿದೆ.