Advertisement

ಸೈರಸ್ ಮಿಸ್ತ್ರಿ ಸಾವನ್ನಪ್ಪಿದ ಕಾರು ಚಲಾಯಿಸುತ್ತಿದ್ದುದು ಖ್ಯಾತ ಸ್ತ್ರೀರೋಗ ತಜ್ಞೆ

08:29 PM Sep 04, 2022 | Team Udayavani |

ಮುಂಬಯಿ: ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ಅಪಘಾತಕ್ಕೀಡಾದ ಕಾರನ್ನು ಮುಂಬಯಿಯ ಖ್ಯಾತ ಸ್ತ್ರೀರೋಗತಜ್ಞರೊಬ್ಬರು ಚಾಲನೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರು ಅತಿವೇಗದಿಂದ ಚಲಿಸುತ್ತಿತ್ತು ಮತ್ತು ರಾಂಗ್ ಸೈಡ್ ನಿಂದ (ಎಡದಿಂದ) ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಅಪಘಾತದಲ್ಲಿ ಸ್ತ್ರೀರೋಗತಜ್ಞೆ ಅನಾಹಿತಾ ಪಾಂಡೋಲೆ (55) ಮತ್ತು ಅವರ ಪತಿ ಡೇರಿಯಸ್ ಪಾಂಡೋಲೆ (60) ಬದುಕುಳಿದಿದ್ದು,ಸೈರಸ್ ಮಿಸ್ತ್ರಿ (54) ಮತ್ತು ಡೇರಿಯಸ್ ಅವರ ಸಹೋದರ ಜಹಾಂಗೀರ್ ಪಾಂಡೋಲೆ ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮಿಸ್ತ್ರಿ ಮತ್ತು ಜಹಾಂಗೀರ್ ಹಿಂದಿನ ಸೀಟಿನಲ್ಲಿ ಇದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಚಾಲನೆ ಮಾಡುತ್ತಿದ್ದ ಅನಾಹಿತಾ ಅವರೊಂದಿಗೆ ಡೇರಿಯಸ್ ಮುಂದಿನ ಸೀಟಿನಲ್ಲಿದ್ದರು.

“ಮಹಿಳೆಯೊಬ್ಬರು ಕಾರನ್ನು ಚಲಾಯಿಸುತ್ತಿದ್ದರು ಮತ್ತು ಎಡಭಾಗದಿಂದ ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿದರು, ಆದರೆ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ” ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

Advertisement

ರಸ್ತೆ ಬದಿಯ ಗ್ಯಾರೇಜ್‌ನಲ್ಲಿ ಕೆಲಸ ಮಾಡುವ ಪ್ರತ್ಯಕ್ಷದರ್ಶಿ ಮರಾಠಿ ಟಿವಿ ಚಾನೆಲ್‌ಗೆ ಹೇಳಿಕೆ ನೀಡಿದ್ದು “ನಾವು ಅಪಘಾತದ ಸ್ಥಳಕ್ಕೆ ಧಾವಿಸಿದೆವು ಆದರೆ ವಾಹನ ಅಥವಾ ಗಾಯಗೊಂಡ ವ್ಯಕ್ತಿಗಳನ್ನು ಮುಟ್ಟಲಿಲ್ಲ ಎಂದಿದ್ದಾರೆ.

“10 ನಿಮಿಷಗಳ ಬಳಿಕ ಇಬ್ಬರು ಗಾಯಗೊಂಡ ವ್ಯಕ್ತಿಗಳನ್ನು ಕಾರಿನಿಂದ ಹೊರತೆಗೆಯಲಾಯಿತು ಮತ್ತು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇಬ್ಬರು ಮೃತಪಟ್ಟಿದ್ದರು ಎಂದು ಅವರು ಹೇಳಿದರು.

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, ಮಿಸ್ತ್ರಿ ಅವರು ಮರ್ಸಿಡಿಸ್ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬಯಿಯತ್ತ ಪ್ರಯಾಣಿಸುತ್ತಿದ್ದರು. ಸೂರ್ಯ ನದಿಯ ಸೇತುವೆಯ ಮೇಲೆ ಭಾನುವಾರ ಮಧ್ಯಾಹ್ನ 3.15 ರ ಸುಮಾರಿಗೆ ಅಪಘಾತ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next